Tuesday, October 22 , 2019
ಅನರ್ಹ ಶಾಸಕರು ಹೇಳಿದ ಅಭ್ಯರ್ಥಿಗಳು ಬಿಜೆಪಿಯಿಂದ ಕಣಕ್ಕೆ | ಸಚಿವ ಈಶ್ವರಪ್ಪ ಹೇಳಿಕೆ

ಬೆಂಗಳೂರು(21.09.2019): ಅನರ್ಹ ಶಾಸಕರಿಗೆ ಪ್ರಾಮುಖ್ಯತೆ ನೀಡಿ ಉಪ ಚುನಾವಣೆಯನ್ನು ಎದುರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದು, ಕಾಂಗ್ರೆಸ್, ಜೆಡಿಎಸ್ ಈಗ ರಾಜ್ಯದಲ್ಲಿ ಅಪ್ರಸ್ತುತವಾಗಿದೆ. ಈ ಚುನಾವನೆಯಲ್ಲಾದರೂ ಸ್ವತಂತ್ರವಾಗಿ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದಾರೆ.

ಕರ್ನಾಟಕ ವಿಧಾನಸಭಾ ಉಪ ಚುನಾವಣೆಯ ದಿನಾಂಕ ಪ್ರಕಟವಾಗುತ್ತಿದ್ದಂತೆಯೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು,  ಅನರ್ಹ ಶಾಸಕರ ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿದೆ. ತೀರ್ಪಿಗಾಗಿ ಕಾದು ನೋಡುತ್ತಿದ್ದೇವೆ. ಅನರ್ಹ ಶಾಸಕರಿಗೆ ಸಮಾಧಾನವಾಗುವ ರೀತಿಯಲ್ಲಿ ಬಿಜೆಪಿ ನಡೆದುಕೊಳ್ಳಲಿದೆ. ಅವರು ಹೇಳಿದ ಅಭ್ಯರ್ಥಿಗಳನ್ನು ನಾವು ಚುನಾವಣೆಗೆ ನಿಲ್ಲಿಸುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್-ಜೆಡಿಎಸ್ ಪಕ್ಷಗಳನ್ನು ನಾವು ಲೆಕ್ಕಕ್ಕೇ ಇಟ್ಟುಕೊಂಡಿಲ್ಲ. ಜೆಡಿಎಸ್, ಕಾಂಗ್ರೆಸ್ ತಾಳಿ ಕಟ್ಟಿದ್ದರೂ ಒಟ್ಟಿಗೆ ಸಂಸಾರ ಮಾಡಲಿಲ್ಲ. ಹೊಂದಾಣಿಕೆಯಿಲ್ಲದೇ ಒಬ್ಬರಿಗೊಬ್ಬರು ಲೋಕಸಭಾ ಚುನಾವಣೆಯಲ್ಲೂ ಸಹಕಾರ ನೀಡಲಿಲ್ಲ ಎಂದು ಅವರು ವ್ಯಂಗ್ಯವಾಡಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]