Friday, August 23 , 2019
ಅಫಿಡವಿಟ್ ನಲ್ಲಿ ಸುಳ್ಳು ಮಾಹಿತಿ; ಸಂಕಷ್ಟಕ್ಕೆ ಸಿಲುಕಿದ ಪ್ರಜ್ವಲ್ ರೇವಣ್ಣ

ಹಾಸನ (15-05-2019): ನಾಮಪತ್ರ ಸಲ್ಲಿಸುವ ವೇಳೆ ಅಫಿಡವಿಟ್ ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಸನ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಗೆ ಚುನಾವಣಾ ಆಯೋಗ ಸೂಚಿಸಿದೆ.

ಬಿಜೆಪಿ ಅಭ್ಯರ್ಥಿ ಎ. ಮಂಜು ಮತ್ತು ಅವರ ವಕೀಲ ದೇವರಾಜೇಗೌಡ ಜಿಲ್ಲಾಧಿಕಾರಿಗೆ ಮತ್ತು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಈ ಬಗ್ಗೆ ಪ್ರರಿಶೀಲಿಸಿದ ಚುನಾವಣಾ ಆಯೋಗ ಪ್ರಜ್ವಲ್ ವಿರುದ್ಧ ಕ್ರಮಕ್ಕೆ ಡಿಸಿಗೆ ಸೂಚಿಸಿದೆ.

ಈ ಮಧ್ಯೆ ಬಿಜೆಪಿ ಅಭ್ಯರ್ಥಿ ಎ. ಮಂಜು ಪ್ರತಿಕ್ರಿಯಿಸಿದ್ದು, ಸುಳ್ಳು ಮಾಹಿತಿ ನೀಡಿರುವ ಪ್ರಜ್ವಲ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಹೈಕೋರ್ಟ್ ಮೊರೆ ಹೋಗುವುದಾಗಿ ಹೇಳಿದ್ದಾರೆ.

 

 

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]