Thursday, December 12 , 2019
ಇಡೀ ದೇಶವನ್ನೇ ಕೊಳ್ಳೆ ಹೊಡೆಯಲಾಗುತ್ತಿದೆ | ಲೋಕಸಭೆಯಲ್ಲಿ ವಿಪಕ್ಷಗಳಿಂದ ಕೋಲಾಹಲ

ನವದೆಹಲಿ(21.11.2019): ಸಾರ್ವಜನಿಕ ವಲಯ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವುದನ್ನು ಮತ್ತು ಚುನಾವಣಾ ಬಾಂಡ್ ಗಳನ್ನು ಬಿಡುಗಡೆ ಮಾಡಿರುವುದನ್ನು ತೀವ್ರವಾಗಿ ವಿರೋಧಿಸಿ ಪ್ರತಿಪಕ್ಷ ಕಾಂಗ್ರೆಸ್ ಲೋಕಸಭೆಯಲ್ಲಿ ತೀವ್ರ ಕೋಲಾಹಲ ನಡೆಸಿತು.

ಸದನದ ಬಾವಿಗಿಳಿದ ಕಾಂಗ್ರೆಸ್ ಸದಸ್ಯರು ಸುಮಾರು 15 ನಿಮಿಷಗಳ ಕಾಲ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಈ ವಿಚಾರವನ್ನು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಲು ಅನುಮತಿ ನೀಡುತ್ತೇನೆ ಎಂಧು ಸಭಾಧ್ಯಕ್ಷ ಬಿರ್ಲಾ ಅವರು ಭರವಸೆ ನೀಡಿದ ಕಾರಣ ಕಾಂಗ್ರೆಸ್ ಸದಸ್ಯರು ತಮ್ಮ ಸ್ಥಾನಗಳಿಗೆ ವಾಪಸ್ ಆದರು.

 ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್(ಬಿಪಿಸಿಎಲ್) ಸಾರಿದಂತೆ ಕೆಲವು ಸಾರ್ವಜನಿಕ ವಲಯ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುತ್ತಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು, ಇದೊಂದು ದೊಡ್ಡ ಹಗರಣವಾಗಿದೆ. ದೇಶವನ್ನು ಲೂಟಿ ಮಾಡಲಾಗುತ್ತಿದೆ. ಇದರ ವಿರುದ್ಧ ಮಾತನಾಡಲು ನಮಗೆ  ಅವಕಾಶ ನೀಡಬೇಕು ಎಂದು ಅಧೀರ್ ರಂಜನ್ ಚೌಧರಿ ಒತ್ತಾಯಿಸಿದರು.

ಇದೊಂದು ದೊಡ್ಡ ಹಗರಣವಾಗಿದೆ.  ನಾವು ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿಸಲು ಈ ವಿಚಾರವನ್ನು ಎತ್ತಿಲ್ಲ. ಇಡೀ ದೇಶವನ್ನೇ ಕೊಳ್ಳೆಹೊಡೆಯಲಾಗುತ್ತಿದೆ. ಇದರ ಬಗ್ಗೆ ಮಾತನಾಡಲು ನಮಗೆ ಅವಕಾಶ ನೀಡಬೇಕು ಎಂದು ಸದಸ್ಯರು ಕೋಲಾಹಲ ನಡೆಸಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]