Wednesday, October 23 , 2019
ಉಪ ಚುನಾವಣೆಯಲ್ಲಿ ಬಿಎಸ್ ಪಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ | ಬಿಎಸ್ ಪಿ ನಾಯಕ ಮಾರಸಂದ್ರ ಮುನಿಯಪ್ಪ ಹೇಳಿಕೆ

ಬೆಂಗಳೂರು(21.09.2019): ಅನರ್ಹ ಶಾಸಕರಿಂದಾಗಿ ತೆರವಾದ 15 ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಬಿಎಸ್ ಪಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪ ಅವರು ಹೇಳಿದ್ದಾರೆ.

ನಿವೃತ್ತ ಮುಖ್ಯ ಅಭಿಯಂತರ ಎಸ್.ಸಿ.ಜಯಚಂದ್ರ ಅವರ ಬಿಎಸ್ ಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ ಈ ವಿಚಾರ ತಿಳಿಸಿದ ಅವರು, ರಾಜ್ಯದ ಹಲವು ಕ್ಷೇತ್ರಗಳಲ್ಲಿ ಬಿಎಸ್ ಪಿ ಗೆಲ್ಲುವ ವಿಶ್ವಾಸ ಇದೆ. ಉಪ ಚುನಾವಣೆಯಲ್ಲಿ ಬೇರೆ ಪಕ್ಷಗಳ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಸದ್ಯ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಪಕ್ಷವನ್ನು ಸದೃಢವಾಗಿ ಕಟ್ಟಲಾಗುತ್ತದೆ. ಕಾನ್ಶೀರಾಮ್ ಅವರು ಶೋಷಿತ ಸಮುದಾಯಕ್ಕೆ  ಅಧಿಕಾರದ ಪಾಲು ನೀಡುವಲ್ಲಿ ದೇಶಾದ್ಯಂತ ಹೋರಾಟ ಮಾಡಿದ್ದಾರೆ. ಅವರ ವಿಚಾರ ಎಲ್ಲೆಡೆಗೆ ಹರಡಬೇಕು ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]