Thursday, December 12 , 2019
ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ ಹಾಲಿ ಸಚಿವರ ಹೆಗಲಿಗೆ

ಬೆಂಗಳೂರು(20.11.2019): ಜೆಡಿಎಸ್-ಕಾಂಗ್ರೆಸ್ ನ ಶಾಸಕರ ಅನರ್ಹತೆಯಿಂದ ತೆರವಾದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಸಮೀಪಿಸುತ್ತಿದೆ. ಇದೀಗ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ ಹಾಲಿ ಸಚಿವರ ಹೆಗಲಿಗೆ ಬಿದ್ದಿದ್ದು, ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾದರೆ, ಹಾಲಿ ಸಚಿವರ ತಲೆ ದಂಡ ವಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆಂದು ವರದಿಯಾಗಿದೆ.

ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿ ಸಚಿವರಿಗೆ ಈ ಎಚ್ಚರಿಕೆಯನ್ನು ಯಡಿಯೂರಪ್ಪನವರು ನೀಡಿದ್ದಾರೆನ್ನಲಾಗುತ್ತಿದೆ. ಸಚಿವರು ತಮ್ಮ ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಒಂದು ವೇಳೆ ಈ ಪ್ರಯತ್ನದಲ್ಲಿ ವಿಫಲರಾದರೆ ತಲೆ ದಂಡಕ್ಕೆ ಸಿದ್ಧರಾಗುವಂತೆ ಬಿಎಸ್ ವೈ ಎಚ್ಚರಿಕೆ ನೀಡಿದ್ದಾರೆನ್ನಲಾಗಿದೆ.

ಬಿಜೆಪಿಯಲ್ಲಿ ನಾಯಕತ್ವದಲ್ಲಿ ಭಿನ್ನಮತ ಏರ್ಪಟ್ಟಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಬಿಎಸ್ ವೈ ಬೆಂಬಲಿಗರ ನೇರ ತಿಕ್ಕಾಟಗಳು ಹಲವಾರು ಬಾರಿ ಬಹಿರಂಗಗೊಂಡಿವೆ. ಈ ಹಿನ್ನೆಲೆಯಲ್ಲಿ ಬಿಎಸ್ ವೈ ಈ ಮಾತುಗಳನ್ನಾಡಿದ್ದಾರೆನ್ನಲಾಗುತ್ತಿದೆ. ಭಿನ್ನಮತ ಶಮನಕ್ಕೆ ಬಿಎಸ್ ವೈ ಬ್ರೇಕ್ ಹಾಕಲು ಇಂತಹದ್ದೊಂದು ಎಚ್ಚರಿಕೆಯನ್ನು ನೀಡಿದ್ದು, ಸಚಿವರುಗಳು ಈ ಆದೇಶವನ್ನು ಅನಿವಾರ್ಯವಾಗಿ ಹೆಗಲೇರಿಸಿಕೊಳ್ಳಲೇ ಬೇಕಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]