Saturday, September 21 , 2019
ಎಸ್ ಎಂ ಕೃಷ್ಣ ಅಳಿಯ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಉದ್ಯಮಿ ವಿ.ಜಿ ಸಿದ್ಧಾರ್ಥ್ ಬರೆದ ಪತ್ರದಲ್ಲಿ ಏನಿದೆ? ಇಲ್ಲಿದೆ ಮಾಹಿತಿ

ಮಂಗಳೂರು(30-07-2019): ಮಾಜಿ ಸಿಎಂ ಎಸ್ ಎಂ ಕೃಷ್ಣ ಅಳಿಯ, ಉದ್ಯಮಿ ವಿ.ಜಿ ಸಿದ್ಧಾರ್ಥ್ ನೇತ್ರಾವತಿ ನದಿ ಸಮೀಪ ನಾಪತ್ತೆ ಪ್ರಕರಣ ಬಿಗ್ ಟ್ವಿಸ್ಟನ್ನು ಪಡೆದುಕೊಂಡಿದ್ದು, ಐಟಿ ಇಲಾಖೆಯ ಅಧಿಕಾರಿಗಳ ಕಿರುಕುಳದ ಬಗ್ಗೆ ಬರೆದ ಪತ್ರ ಇದೀಗ ಬಹಿರಂಗವಾಗಿದೆ.

ಕಾಫಿ ಡೇ ನಿರ್ದೇಶಕರಿಗೆ ಬರೆದ ಪತ್ರದಲ್ಲಿ ಐಟಿ ಇಲಾಖೆ ಅಧಿಕಾರಿಗಳ ಕಿರುಕುಳದ ಬಗ್ಗೆ ಬರೆದಿರುವ ವಿ.ಜಿ ಸಿದ್ಧಾರ್ಥ್, ಆದಾಯ ತೆರಿಗೆ ಅಧಿಕಾರಿಗಳ ಕಿರುಕುಳ ನನ್ನಿಂದ ತಡೆಯಲು ಸಾಧ್ಯವಾಗುತ್ತಿಲ್ಲ. ಹಿಂದಿನ ಆದಾಯ ತೆರಿಗೆ ಇಲಾಖೆಯ ಡಿಜಿ ಅವರು ನನಗೆ ಮಾನಸಿಕವಾಗಿ ಬಹಳ ಕಿರುಕುಳ ನೀಡಿದ್ದಾರೆ. ಇಂದಿನ ನನ್ನ ಈ ಪರಿಸ್ಥಿತಿಗೆ ಇದೇ ಕಾರಣ. ಒತ್ತಡದ ಮಧ್ಯೆಯೂ ನಾನು ತೆರಿಗೆ ಸಲ್ಲಿಕೆ ಮಾಡಿದ್ದೇನೆ. ನಾನು ಕಳೆದ ಆರು ತಿಂಗಳ ಹಿಂದೆ ಸ್ನೇಹಿತರಿಂದ ದೊಡ್ಡ ಮಟ್ಟದ ಸಾಲ ಪಡೆದಿದ್ದು, ಒಬ್ಬ ಉದ್ಯಮಿಯಾಗಿ ನಾನು ಸೋತಿದ್ದೇನೆ  ಎಂದು ಪತ್ರದಲ್ಲಿ ಬರೆದಿದ್ದಾರೆ.

ನಿನ್ನೆಯಿಂದ ಸಿದ್ಧಾರ್ಥ್ ನಾಪತ್ತೆಯಾಗಿದ್ದು, ಆರಂಭದಲ್ಲಿ ಅವರು ಅಪಹರಣವಾಗಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿತ್ತು. ಆದರೆ ಕಾಫಿ ಡೇ ನಿರ್ದೇಶಕರಿಗೆ ಬರೆದ ಪತ್ರದಲ್ಲಿ ಅವರು ಹೇಳಿರುವ ವಿಚಾರಗಳನ್ನು ನೋಡಿದರೆ ಸಿದ್ಧಾರ್ಥ್ ಅವರು ಆತ್ಮಹತ್ಯೆಯ ಬಗ್ಗೆ ಶಂಖೆ ವ್ಯಕ್ತವಾಗಿದೆ.

ಸಿದ್ಧಾರ್ಥ್ ಅವರ ಪತ್ತೆಗಾಗಿ ಡಿಜಿಪಿ ನಿಲಮಣಿ ರಾಜು ಅವರ ನೇತೃತ್ವದ ತಂಡ ತನಿಖೆ ನಡೆಸುತ್ತಿದ್ದು, ಸಿದ್ಧಾರ್ಥ್ ನಾಪತ್ತೆಯಾದ ನೇತ್ರಾವತಿ ನದಿ ತೀರದಲ್ಲಿ ಶೋಧಕಾರ್ಯ ನಡೆಸಲಾಗುತ್ತಿದೆ. ಸಿದ್ಧಾರ್ಥ್​ ದೊಡ್ಡ ಉದ್ಯಮಿ ಎನಿಸಿಕೊಂಡಿದ್ದರು. ಕಾಫಿ ಬೆಳೆಯುವ ಕುಟುಂಬದ ಹಿನ್ನೆಲೆಯಿಂದ ಬಂದ ಅವರು ಅದನ್ನು ದೊಡ್ಡ ಉದ್ಯಮವನ್ನಾಗಿಸಿದರು. ಆದರೆ ಸಿದ್ಧಾರ್ಥ್ ಅವರ ಇತ್ತೀಚಿನ ವ್ಯವಹಾರ,ಉದ್ಯಮದಲ್ಲಿ ಸಾವಿರಾರು ಕೋಟಿ ನಷ್ಟ ಉಂಟಾಗಿದೆ ಎನ್ನಲಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]