Saturday, June 15 , 2019
ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ನಟ ಚೇತನ್–ಚಿರಂಜೀವಿ ಸರ್ಜಾ

ಆ ದಿನಗಳು ಖ್ಯಾತಿಯ ನಟ ಅಹಿಂಸಾ ಚೇತನ್ ಟಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದು, ಮೊದಲ ಬಾರಿಗೆ ಆ್ಯಕ್ಷನ್ ಹೀರೋ ಆಗಿ ಅಭಿನಯಿಸಲಿದ್ದಾರೆ. ಈವರೆಗೆ ಯಾವುದೇ ಸಿನಿಮಾದಲ್ಲಿ ಮಾಡದಂತಹ ಪಾತ್ರವನ್ನು ಚೇತನ್ ಈ ಚಿತ್ರದಲ್ಲಿ ಮಾಡಲಿದ್ದಾರೆ.

ಸಾಮಾಜಿಕ ಸೇವೆ, ಹೋರಾಟಗಳಲ್ಲಿ ಬಿಝಿಯಾಗಿದ್ದ ಚೇತನ್ ಇದೀಗ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ನಿರ್ಮಾಣವಾಗಲಿರುವ ‘ರಣಂ’ ಚಿತ್ರದಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳಲಿದ್ದಾರೆ. ಹೊಸ ಗೆಟಪ್ ನಲ್ಲಿ ಕಾಣಿಸಿಕೊಂಡಿರುವ ಖಡಕ್ ನಾಯಕನಾಗಿ ಚೇತನ್ ಈ ಚಿತ್ರದಲ್ಲಿ ಮಿಂಚಲಿದ್ದಾರೆ.

ಸಾಮಾಜಿಕ ಹೋರಾಟಗಾರ, ರೈತಪರ ನಾಯಕನ ಪಾತ್ರದಲ್ಲಿ ಮಿಂಚಲಿರುವ ಚೇತನ್, ತನ್ನ ಜೀವನಕ್ಕೆ ಹತ್ತಿರವಿರುವ ಪಾತ್ರವನ್ನು ಮಾಡಿದ್ದಾರೆ. ಈ ಚಿತ್ರದಲ್ಲಿ ತಮಿಳು ಖ್ಯಾತ ನಟಿ, ವರಲಕ್ಷ್ಮೀ ಶರತ್ ಕುಮಾರ್ ಅವರು ನಟಿಸಲಿದ್ದಾರೆ. ವಿಶೇಷ ಪಾತ್ರದಲ್ಲಿ ಚಿರಂಜೀವಿ ಸರ್ಜಾ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಇನ್ನೂ ಇದು ಸ್ಪಷ್ಟಗೊಂಡಿಲ್ಲ. ಕನಕಪುರ ಶ್ರೀನಿವಾಸ್ ಚಿತ್ರದ ನಿರ್ಮಾಪಕರಾಗಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...