Friday, August 23 , 2019
ಕಾಂಗ್ರೆಸ್ ಗೆ ಮತ ಹಾಕಿದ ಸಹೋದರನ ಮೇಲೆ ಗುಂಡಿನ ದಾಳಿ ನಡೆಸಿದ ಬಿಜೆಪಿ ಮುಖಂಡ

ಚಂಡಿಗಡ(15/05/2019): ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ ಸೋದರ ಸಂಬಂಧಿಯ ಮೇಲೆ ಬಿಜೆಪಿ ಮುಖಂಡ ಗುಂಡು ಹಾರಿಸಿದ ಆಘಾತಕಾರಿ ಘಟನೆ ಹರ್ಯಾಣದ ಜಾಜರ್ ಎಂಬಲ್ಲಿ ನಡೆದಿದೆ.

ರಾಜಾ ಸಿಂಗ್ ಗುಂಡಿನ ದಾಳಿಗೆ ಒಳಗಾದ ನತದೃಷ್ಟ ವ್ಯಕ್ತಿ. ಇವರ ಮೇಲೆ ಸ್ಥಳೀಯ ಬಿಜೆಪಿ ಮುಖಂಡ ಧರ್ಮೇಂದರ್ ಸಿಲಾನಿ  ಎರಡು ಬಾರಿ ಕಾಲಿಗೆ ಹಾಗೂ ಒಂದು ಬಾರಿ ಹೊಟ್ಟೆಗೆ ಗುಂಡು ಹಾರಿಸಿದ್ದಾನೆ. ಘಟನೆಯಿಂದ ಗಂಭೀರ ಗಾಯಗೊಂಡ ರಾಜಾ ಸಿಂಗ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ಧರ್ಮೇಂದರ್ ಸಿಲಾನಿ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ ಕೊಲೆಯತ್ನ ಹಾಗೂ ಶಸ್ತ್ರಾಸ್ತ್ರ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜಾ ಸಿಂಗ್ ಹಾಗೂ ಆತನ ಕುಟುಂಬದೊಡನೆ ಬಿಜೆಪಿಗೆ ಮತ ಹಾಕುವಂತೆ ಸಿಲಾನಿ ಕೋರಿದ್ದ ಎನ್ನಲಾಗಿದೆ. ಆದರೆ, ಇದನ್ನು ಪರಿಗಣಿಸದೆ ರಾಜಾ ಸಿಂಗ್ ಕುಟುಂಬ ಕಾಂಗ್ರೆಸ್ ಗೆ ಮತ ಹಾಕಿತ್ತು. ಇದರಿಂದ ಕೆರಳಿರುವ ಧರ್ಮೇಂದರ್ ಸಿಲಾನಿ ಮಲ ಸಹೋದರನ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]