Saturday, June 15 , 2019
ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಚ್.ಕೆ.ಪಾಟೀಲ್

ಬೆಂಗಳೂರು(24.05.2019): ರಾಜ್ಯದಲ್ಲಿ ಕಾಂಗ್ರೆಸ್ ನ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಚ್.ಕೆ.ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಸೋಲಿನ ನೈತಿಕ ಹೊಣೆ ಹೊತ್ತು ತಾನು ರಾಜೀನಾಮೆ ನೀಡುವುದಾಗಿ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ.

ಈ ಬೃಹತ್ ಸೋಲಿನ ಬಗ್ಗೆ ಆತ್ಮಾವಲೋಕನ ನಡೆಯಬೇಕಿದೆ. ಜೆಡಿಎಸ್ ಜೊತೆಗಿನ ಮೈತ್ರಿ ದುಬಾರಿಯಾಯಿತೇ ಎನ್ನುವುದರ ಬಗ್ಗೆಯ ಚರ್ಚೆ ನಡೆಯಬೇಕಿದೆ ಎಂದು ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಮೈತ್ರಿ ಸರಕಾರ ಮುಂದುವರಿಯಲಿದೆಯೇ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಪ್ರಶ್ನೆಗೆ ಕಾಲವೇ ಉತ್ತರಿಸಬೇಕಿದೆ. ಈ ಬಗ್ಗೆ ಎರಡೂ ಪಕ್ಷಗಳೂ ಚರ್ಚಿಸಬೇಕಿದೆ ಎಂದು ಅವರು ಹೇಳಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...