Saturday, June 15 , 2019
ಗ್ಯಾಸ್ ಸಿಲಿಂಡರ್ ಸ್ಫೋಟ: ರಣಂ ಚಿತ್ರದ ಸ್ಟಂಟ್ ಮಾಸ್ಟರ್ ಬಂಧನ

ಬೆಂಗಳೂರು: ರಣಂ ಚಿತ್ರದ ಚಿತ್ರೀಕರಣದ ವೇಳೆ ನಡೆದ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ತಾಯಿ ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಸ್ಟಂಟ್ ಮಾಸ್ಟರ್ ಸುಭಾಷ್(55) ನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಹಲವು ವರ್ಷದಿಂದ ಕನ್ನಡ ಸಿನಿಮಾದಲ್ಲಿ ಸ್ಟಂಟ್ ಮಾಸ್ಟರ್ ಆಗಿ ಕೆಲಸ ಮಾಡುತ್ತಿರುವ ಸುಭಾಷ್, ರಣಂ ಚಿತ್ರದ ಚಿತ್ರೀಕರಣದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಿಸಲು ಹೋಗಿ ಸುಮೈರಾ ಬಾನು ಹಾಗೂ ಆಕೆಯ ಪುತ್ರಿ ಆಯೇರಾ ಬಾನು ಅವರ ಸಾವಿಗೆ ಕಾರಣರಾಗಿದ್ದರು. ದುರಂತದ ನಂತರ ತಲೆ ಮರೆಸಿಕೊಂಡಿದ್ದ ಸುಭಾಷ್ ನನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ.

ಸುಭಾಷ್ ಸಾಹಸ ನಿರ್ದೇಶಕ ವಿಜಯನ್ ಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ವಿಜಯನ್ ತಲೆಮರೆಸಿಕೊಂಡಿದ್ದು, ಪೊಲೀಸರು ಬಲೆ ಬೀಸಿದ್ದಾರೆ.

ಮೃತ ಸುಮೈರಾ ಬಾನು ಅವರ ಪತಿ ತಬ್ರೇಜ್ ಖಾನ್ ಕರ್ನಾಟಕ ಚಲನ ಚಿತ್ರ ಮಂಡಳಿಗೆ ದೂರು ನೀಡಿದ್ದಾರೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...