Saturday, June 15 , 2019
ಚುನಾವಣೆ ಗೆದ್ದ ಬಳಿಕ ಆಡ್ವಾಣಿಯನ್ನು ಭೇಟಿ ಮಾಡಿದ ಮೋದಿ-ಅಮಿತ್ ಶಾ

ನವದೆಹಲಿ(24.05.2019): ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿಯಾಗಿ ಆಯ್ಕೆಯಾದ ಸಂದರ್ಭ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರಿಗೆ ಅಗೌರವ ತೋರಿಸಿ ದೇಶಾದ್ಯಂತ ಸುದ್ದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಚುನಾವಣಾ ಗೆಲುವಿನ ಬಳಿಕ ಅಡ್ವಾಣಿ ಅವರನ್ನು ಭೇಟಿ ಮಾಡಿದ್ದಾರೆ.

ಆಡ್ವಾಣಿ ಅವರ ಮನೆಗೆ ತೆರಳಿದ್ದ ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಆಡ್ವಾಣಿ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಬಳಿಕ ಈ ಚಿತ್ರವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಪಕ್ಷವನ್ನು ಬೆಳೆಸಲು ಆಡ್ವಾಣಿ ಹಾಗೂ ವಾಜಪೇಯಿ ಪ್ರಮುಖ ಪಾತ್ರ ವಹಿಸಿದ್ದರು. ಈ ಕಾರಣಕ್ಕಾಗಿ ತಾನು ಎರಡನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಆಡ್ವಾಣಿ ಅವರ ಭೇಟಿಯ ಜೊತೆಗೆ ಆರೆಸ್ಸೆಸ್ ನಾಯಕ ಮುರುಳಿ ಮನೋಹರ್ ಜೋಶಿ ಅವರನ್ನು ಮೋದಿ ಭೇಟಿಯಾಗಿದ್ದು, ಬಿಜೆಪಿಯ ಬಲವರ್ಧನೆಗೆ ಮುರುಳಿ ಮನೋಹರ್ ಜೋಶಿ ಸದಾ ದುಡಿಯುತ್ತಾರೆ. ಇಂದು ಬೆಳಗ್ಗೆ ನಾನು ಅವರ ಆಶೀರ್ವಾದ ಪಡೆದುಕೊಂಡಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...