Tuesday, January 28 , 2020
ಟಿವಿ ವಾಹಿನಿಗಳ ವಿರುದ್ಧ ದೂರನ್ನು ನೀಡಬೇಕಾ? ಸಹಾಯವಾಣಿ ನಂಬರಿಗಾಗಿ ಈ ಸುದ್ದಿಯನ್ನು ಓದಿ

ಕೋಲಾರ (12-12 -2019): ಕೇಬಲ್ ಟಿವಿ ಮತ್ತು ಉಪಗ್ರಹ ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುವ ಸುದ್ದಿಗಳ ಬಗ್ಗೆ ದೂರುಗಳನ್ನು ಸಲ್ಲಿಸಲು 24 ಗಂಟೆಯೂ ಕಾರ್ಯ ನಿರ್ವಹಿಸುವ ಸಾರ್ವಜನಿಕ ನಿಯಂತ್ರಣ ಕೊಠಡಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸ್ಥಾಪಿಸಿದೆ.

ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುವ ಮಾನಹಾನಿಕಾರಕ, ಅಸಭ್ಯ, ನಿಂದನಾತ್ಮಕ, ಕೋಮು ಪ್ರಚೋದಕ, ಸುಳ್ಳು, ಹಿಂಸೆ, ಗಲಭೆಯನ್ನು ಪ್ರಚೋದಿಸುವ, ರಾಷ್ಟ್ರವಿರೋಧಿ, ನ್ಯಾಯಾಲಯ ನಿಂದನೆ, ಜಾಹೀರಾತು ಸೇರಿದಂತೆ ಯಾವುದೇ ದೂರುಗಳನ್ನು ಸಾರ್ವಜನಿಕರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನೀಡಬಹುದು.

ಈಗೆ ನೀಡಿದ ದೂರನ್ನು ಜಿಲ್ಲಾ ನಿರ್ವಹಣಾ ಸಮಿತಿಗೆ  ಮತ್ತು ರಾಜ್ಯ ನಿರ್ವಹಣಾ ಸಮಿತಿಗೆ ನೀಡಿ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.

ಸಾರ್ವ ಜನಿಕರು ದೂರನ್ನು ಸಹಾಯವಾಣಿ ದೂರವಾಣಿ ಸಂಖ್ಯೆ 080-22028013, ಅಥವಾ 9480841212ಕ್ಕೆ ಕರೆ ಮಾಡಿ ಹೇಳಬಹುದಾಗಿದೆ.  ಅಥವಾ complaintsontelevision@gmail.com ಗೆ ದೂರನ್ನು ಮೈಲ್ ಮಾಡಬಹುದಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]