Tuesday, July 14 , 2020
ಡಾ.ಶಿವಕುಮಾರರನ್ನು ಗೆಲ್ಲಿಸಿ, ಮಾಯಾವತಿ ಕೈ ಬಲಪಡಿಸಿ | ಮಾದಿಗ ಸಮುದಾಯ ಒಕ್ಕೂಟ ಕರೆ

ಟಿ.ನರಸೀಪುರ(16.04.2019): ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಎಸ್ ಪಿ ಅಭ್ಯರ್ಥಿ ಡಾ.ಶಿವಕುಮಾರ್ ಅವರನ್ನು ಬೆಂಬಲಿಸುವಂತೆ ಮಾದಿಗ ಸಮುದಾಯದ ಮುಖಂಡರು ಹಾಗೂ ಮಹಿಳಾ ಸಂಘದ ಪದಾಧಿಕಾರಿಗಳು ಕರೆ ನೀಡಿದ್ದಾರೆ.

ಸಜ್ಜನ ವ್ಯಕ್ತಿ ಹಾಗೂ ಸೌಮ್ಯ ಸ್ವಭಾವದವರಾಗಿರುವ ಮತ್ತು ಸಾಮಾಜಿಕ ಕಳಕಳಿ ಹೊಂದಿರುವ ಐ ಎ ಎಸ್, ಐಪಿಎಸ್,  ಕೆಎಎಸ್ ತರಬೇತುದಾರರಾಗಿರುವ ಡಾ.ಶಿವಕುಮಾರ್ ಅವರು ಈ ಬಾರಿ ಚಾಮರಾಜನಗರ ಕ್ಷೇತ್ರದಲ್ಲಿ ಬಿಎಸ್ ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಹಾಗಾಗಿ ಮಾದಿಗ ಸಮುದಾಯ ಹಾಗೂ ಮಹಿಳಾ ಸಂಘದ ಪ್ರತಿನಿಧಿಗಳು ಡಾ.ಶಿವಕುಮಾರ್ ಅವರನ್ನು ಬೆಂಬಲಿಸುತ್ತೇವೆ ಎಂದು ಸಂಘಟನೆ ತಿಳಿಸಿದೆ.

ರಾಷ್ಟ್ರಮಟ್ಟದಲ್ಲಿ ಬಿಎಸ್ ಪಿ ಅಧ್ಯಕ್ಷೆ ಮಾಯಾವತಿ ಅವರ ಕೈಗಳನ್ನು ಬಲಪಡಿಸುವ ಅನಿವಾರ್ಯವಿದೆ. ಈ ಬಾರಿ ಡಾ.ಶಿವಕುಮಾರ್ ಅವರನ್ನು ಗೆಲ್ಲಿಸುವ ಮೂಲಕ ಮಾಯಾವತಿ ಅವರ ಕೈಗಳನ್ನು ಬಲಪಡಿಸಬೇಕಿದೆ ಎಂದು ಸಂಘಟನೆಯ ಮುಖಂಡರು ಕರೆ ನೀಡಿದ್ದಾರೆ.

ಡಾ.ಶಿವಕುಮಾರ್ ಅವರನ್ನು ಬೆಂಬಲಿಸುವಂತೆ ಮಾದಿಗ ಸಮುದಾಯಕ್ಕೆ ಮಾಡಿಕ ಸಮುದಾಯದ ಒಕ್ಕೂಟಗಳ ಪದಾಧಿಕಾರಿಗಳಾದ ರವಿಶೇಖರ್, ಕುಮಾರ, ರಾಜು, ಜವರಯ್ಯ, ಶೇಷಣ್ಣ, ದಾಸಪ್ಪ, ಸರೋಜಮ್ಮ, ಪ್ರಭಾ, ಲಕ್ಷ್ಮೀ, ಜಯ ಮೊದಲಾದವರು ಮನವಿ ಮಾಡಿಕೊಂಡಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]