Thursday, December 12 , 2019
ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಚ್ಚಿದರೂ ಕ್ಯಾರೇ ಎನ್ನದೆ ಪಾಠ ಮುಂದುವರಿಸಿದ ಶಿಕ್ಷಕ, ಬಾಲಕಿ ಸಾವು

ವಯನಾಡ್ (21-11-2019): ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿಯಲ್ಲಿ 10 ವರ್ಷದ ಬಾಲಕಿ ತರಗತಿಯೊಳಗೆ ಹಾವು ಕಚ್ಚಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಐದನೇ ತರಗತಿ ವಿದ್ಯಾರ್ಥಿನಿ ಶೆಹಲಾಳನ್ನು ಘಟನೆಯ ಒಂದು ಗಂಟೆಯ ನಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಸರ್ಕಾರಿ ವೃತ್ತಿಪರ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಆಕೆಯ ಸಹಪಾಠಿಗಳು ಶಿಕ್ಷಕನ ನಿರ್ಲಕ್ಷ್ಯದ ಬಗ್ಗೆ ಆರೋಪಿಸಿದ್ದು, ಅವಳ ತಂದೆ ಆಸ್ಪತ್ರೆಗೆ ಕರೆದೊಯ್ಯುವುದಾಗಿ ಹೇಳುತ್ತಾ, ಶಿಕ್ಷಕ ತರಗತಿಯನ್ನು ಮುಂದುವರಿಸಿದ್ದಾನೆ. ಅಷ್ಟೊತ್ತಿಗೆ ಹುಡುಗಿಯ ಕಾಲು ನೀಲಿ ಬಣ್ಣಕ್ಕೆ ತಿರುಗಿದೆ ಎಂದು ಹೇಳಿದ್ದಾರೆ.

ಈ ಘಟನೆ ಬುಧವಾರ ಸಂಭವಿಸಿದೆ. ಟೆಲಿವಿಷನ್ ಚಾನೆಲ್‌ಗಳು ವಿದ್ಯಾರ್ಥಿನಿ ಕುಳಿತಿದ್ದ ಮೇಜಿನ ಕೆಳಗೆ ರಂಧ್ರಗಳಿರುವ ಬಗೆಗಿನ ತರಗತಿಯ ದೃಶ್ಯಗಳನ್ನು ಪ್ರಸಾರ ಮಾಡಿದೆ. ಘಟನೆ ಬಳಿಕ ಶಿಕ್ಷಕನನ್ನು ಅಮಾನತು ಮಾಡಲಾಗಿದೆ, ಮಗುವಿನ ಸಂಬಂಧಿ ಶಹನಾವಾಜ್, ಶಾಲೆ ಮತ್ತು ಅವಳನ್ನು ಮೊದಲು ದಾಖಲಿಸಿದ ಆಸ್ಪತ್ರೆ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]