Saturday, June 15 , 2019
ದ.ಕ.ಲೋಕಸಭಾ ಕ್ಷೇತ್ರ: ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ ಬಿಜೆಪಿ ಮುಖಂಡ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ  ಸೋಲಿನ ಭೀತಿಯಲ್ಲಿರುವ ಬಿಜೆಪಿಗೆ ಪಕ್ಷದ ಬೆಳ್ತಂಗಡಿ ತಾಲೂಕು ಸಮಿತಿಯ ಅಧ್ಯಕ್ಷ ರಂಜನ್ ಗೌಡ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ.

ಶುಕ್ರವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಅವರು ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಖ ಖಚಿತವಾಗಿದೆ. ಸೋಮವಾರ ಬೆಳ್ತಂಗಡಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶದಲ್ಲಿ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ರಂಜನ್ ಗೌಡ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಗಂಗಾಧರ ಗೌಡರ ಪುತ್ರರಾಗಿದ್ದಾರೆ. 2013ರಲ್ಲಿ ಅವರ ಬಿಜೆಪಿ ಪಕ್ಷದಿಂದ ಬೆಳ್ತಂಗಡಿ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ವಸಂತ ಬಂಗೇರ ವಿರುದ್ಧ ಸೋತಿದ್ದರು.  2013ರ ವಿಧಾನ ಸಭಾ ಚುನಾವಣೆಯಲ್ಲಿ ಸೋತಿದ್ದರೂ, ರಂಜನ್ ಗೌಡ 58, 789 ಮತಗಳನ್ನು ಪಡೆದಿದ್ದರು.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...