Tuesday, July 23 , 2019
ನಟ ದರ್ಶನ್ ಚುನಾವಣಾ ಪ್ರಚಾರಕ್ಕೆ ಹೋಗುವುದೇಕೆ? ಕಾರಣ ಬಿಚ್ಚಿಟ್ಟ ಡಿ`ಬಾಸ್’

ಬೆಂಗಳೂರು(09/04/2019): ಕಳೆದ ಒಂದೆರಡು ವಾರಗಳಿಂದ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡಿದ್ದ ದರ್ಶನ್ ನಿನ್ನೆ ದಿಢೀರನೇ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಪರ ಪ್ರಚಾರದಲ್ಲಿ ಭಾಗವಹಿಸಿ ಅಚ್ಚರಿ ಹುಟ್ಟಿಸಿದ್ದರು.

ತಾನು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ಮಿತ್ರರು ಯಾವುದೇ ಪಕ್ಷದಲ್ಲಿದ್ದರೂ ಪ್ರಚಾರ ಮಾಡುತ್ತೇನೆ ಎಂದು ಕಳೆದ ಹಲವು ವರ್ಷಗಳಿಂದ ದರ್ಶನ್ ಹೇಳುತ್ತಾ ಬಂದಿದ್ದಾರೆ.

ಆದರೂ, ಸಿನಿಮಾ ನಟರು ತಮಗೆ ಕೋಟಿಗಳ ಲೆಕ್ಕದಲ್ಲಿ ಸಿಗುವ ಹಣಕ್ಕಾಗಿಯೇ ಪ್ರಚಾರಕ್ಕೆ ಹೋಗುತ್ತಾರೆ ಎಂಬ ಮಾತು ಈಗಲೂ ಜನ ಸಾಮಾನ್ಯರ ನಡುವೆಯಿದೆ. ದರ್ಶನ್ ಇದನ್ನು ನಿರಾಕರಿಸಿದ್ದಾರೆ.

ನಿನ್ನೆ ಬೆಂಗಳೂರಿನ ಸೆಂಟ್ರಲ್ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಪರ ದರ್ಶನ್ ಪ್ರಚಾರ ನಡೆಸಿದರು. ಈ ವೇಳೆ ಅವರು ತಾವು ಯಾಕೆ ಚುನಾವಣಾ ಪ್ರಚಾರಕ್ಕೆ ಹೋಗುತ್ತೇನೆ ಎಂಬುದನ್ನು ಹೇಳಿಕೊಂಡಿದ್ದಾರೆ.

`ನಾನು ನನ್ನ ಸ್ವಂತಕ್ಕಾಗಿ ಪ್ರಚಾರಕ್ಕೆ ಬಂದಿಲ್ಲ. ಹಲವಾರು ಮಂದಿ ಕಾಯಿಲೆ ಕಾರಣದಿಂದ ನೆರವು ಕೇಳಿಕೊಂಡು ಬರುತ್ತಾರೆ. ರಾಜಕಾರಣಿಗಳ ಶಿಫಾರಸು ಪತ್ರ ಕೊಟ್ಟರೆ ಶೇ. 30 ರಷ್ಟು ಹಣ ಅನುಕೂಲವಾಗುತ್ತೆ. ಉಳಿದ ಹಣವನ್ನು ನಾವು ಹಾಕುತ್ತೇವೆ. ಇದರಿಂದ ಬಡವರಿಗೆ ಅನುಕೂಲವಾಗುತ್ತದೆ. ಈ ಕಾರಣದಿಂದ ಪ್ರಚಾರ ನಡೆಸುತ್ತೇನೆ ಎಂದು ದರ್ಶನ್  ತಿಳಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...