Saturday, June 15 , 2019
ನಾಳೆ ಮತ ಎಣಿಕೆ: ಮಧ್ಯಾಹ್ನ 3 ಗಂಟೆಗೆ ರಾಜ್ಯದಲ್ಲಿ ಫಲಿತಾಂಶ ಹೊರಬೀಳುವ ಸಾಧ್ಯತೆ

ಬೆಂಗಳೂರು(22/05/2019):  ಲೋಕಸಭಾ ಚುನಾವಣೆಯ ಮೊದಲ ಫಲಿತಾಂಶ ನಾಳೆ ಹೊರಬೀಳಲಿದ್ದು, ರಾಜ್ಯದಲ್ಲಿ   ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ಮತದಾನದ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ತಿಳಿಸಿದರು.

28 ಲೋಕಸಭಾ ಕ್ಷೇತ್ರಗಳು ಮತ್ತು ಉಪಚುನಾವಣೆ ನಡೆದಿರುವ 2 ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆ ಮೇ 23ರಂದು ನಡೆಯಲಿದ್ದು ಅದರ ಸಿದ್ಧತೆ ಕುರಿತು ಅವರು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

ಸುಪ್ರೀಂಕೋರ್ಟ್‌ ಸೂಚನೆಯ ಮೇರೆಗೆ ಈ ಬಾರಿ ಪ್ರತಿ ಲೋಕಸಭಾ ಕ್ಷೇತ್ರದ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ಐದು ಮತಗಟ್ಟೆಗಳ ವಿವಿಪ್ಯಾಟ್‌ ಚೀಟಿಗಳನ್ನು ಎಣಿಕೆ ಮಾಡಿ ಇವಿಎಂ ಫಲಿತಾಂಶದ ಜತೆ ತಾಳೆ ಮಾಡಲಾಗುತ್ತದೆ. ಇದರಿಂದ ಫಲಿತಾಂಶ ಹೊರಬೀಳಲು ಸುಮಾರು 4 ಗಂಟೆಗಳಷ್ಟು ವಿಳಂಬವಾಗುತ್ತದೆ. ಇವಿಎಂ ಮತ ಎಣಿಕೆ ಬೇಗನೇ ಮುಗಿಯುತ್ತದೆ.

ಬೆಳಿಗ್ಗೆ 8ಕ್ಕೆ ಅಂಚೆ ಮತಗಳ ಎಣಿಕೆ ಆರಂಭವಾಗಲಿದೆ. ಎಲ್ಲ 28 ಕ್ಷೇತ್ರಗಳಲ್ಲಿ ಈವರೆಗೆ ಒಟ್ಟು 98,606 ಅಂಚೆ ಮತಗಳು ಬಂದಿವೆ. ಮತ ಎಣಿಕೆಗೂ ಮೊದಲು ಬರುವ ಅಂಚೆ ಮತವನ್ನು ಗಣನೆಗೆ ತೆಗೆದುಕೊಳ್ಳಲಾಗುವುದು. ಆ ಬಳಿಕ ಬಂದ ಅಂಚೆ ಮತಗಳನ್ನು ಎಣಿಕೆ ಮಾಡುವುದಿಲ್ಲ. ಒಂದು ಸುತ್ತಿನ ಮತ ಎಣಿಕೆಗೆ ಸುಮಾರು 45 ನಿಮಿಷಗಳು ಬೇಕಾಗುತ್ತದೆ ಎಂದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...