Friday, August 23 , 2019
ಪಕ್ಕಾ ಕಾಮಿಡಿಯಾಗಿದೆಯಾ ಹಂಬಲ್ ಪೊಲಿಟಿಷಿಯನ್?  

ಸಿನಿ ವಿಮರ್ಶೆ(16-01-2018): ಸಿನಿ ಪ್ರಿಯರಲ್ಲಿ ಭಾರೀ ನಿರೀಕ್ಷೆಯನ್ನು ಮೂಡಿಸಿರುವ ಹಂಬಲ್ ಪೊಲಿಟಿಷಿಯನ್ ನೊಗರಾಜ್ ರಾಜ್ಯಾದ್ಯಂತ ಬಿಡುಗಡೆಯಾಗಿದೆ.  ಪಕ್ಕಾ ಕಾಮಿಡಿಯಾಗಿರುವ ಈ ಸಿನಿಮಾ ರಾಜಕೀಯ ವ್ಯವಸ್ಥೆಯ ಬಗ್ಗೆ ಇದೆ. ಹಾಗಂತ ಇಲ್ಲಿ ಉಪದೇಶ ಮಾಡಿಲ್ಲ.

ಹಂಬಲ್ ಪೊಲಿಟಿಷಿಯನ್ ನೊಗರಾಜ್ ರಾಜಕೀಯ ಹಿನ್ನೆಲೆಯಲ್ಲಿ ಸಾಗುವ ಕಥೆಯನ್ನು ಹೊಂದಿದೆ. ರಾಜಕೀಯ, ರಾಜಕಾರಣಿಗಳನ್ನು ವಿಡಂಬಣೆ ಮಾಡುತ್ತಾ ಸಾಗುವ ಈ ಸಿನಿಮಾದಲ್ಲಿ ನಿಮಗೆ ಮನರಂಜನೆಗೇನೂ ಕೊರತೆಯಿಲ್ಲ. ಇಡೀ ಸಿನಿಮಾವನ್ನು ಕಾಮಿಡಿ ಹಿನ್ನೆಲೆಯಲ್ಲಿ ಕಟ್ಟಿಕೊಡುವ ಮೂಲಕ ಸಿಕ್ಕಾಪಟ್ಟೆ ಸೀರಿಯಸ್ ಸಿನಿಮಾ ಎಂಬ ಮಾತಿನಿಂದ ನೊಗರಾಜ್ ನನ್ನುಮುಕ್ತವಾಗಿಸಿದ್ದಾರೆ. ಈಗಾಗಲೇ ರಾಜಕೀಯ, ಭ್ರಷ್ಟ ರಾಜಕಾರಣಿಗಳನ್ನು ವಿಡಂಬಣೆ ಮಾಡುವ ಚಿತ್ರಗಳು ಕನ್ನಡದಲ್ಲಿ ಬಂದಿವೆ. ಆದರೆ, ‘ನೊಗ್ ರಾಜ್’ನ ಕಥೆಯಲ್ಲಿ ರಾಜಕೀಯ ವಿಡಂಬಣೆ ಇದ್ದರೂ ನಿರ್ದೇಶಕರು ಅದನ್ನು ತಮ್ಮದೇ ಶೈಲಿಯಲ್ಲಿ ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ಆ ಮಟ್ಟಿಗೆ ಇದು ಹೊಸ ಪ್ರಯತ್ನ ಎನ್ನಬಹುದು.

ಇನ್ನು ಚಿತ್ರದಲ್ಲಿ ಒಂದಷ್ಟು ದೃಶ್ಯಗಳಿಗೆ ಕತ್ತರಿ, ಹಾಕಿ ಟ್ರಿಮ್ ಮಾಡುವ ಅವಕಾಶ ನಿರ್ದೇಶಕರಿಗಿತ್ತು. ಚಿತ್ರದ ಸಂಭಾಷಣೆ ಚುರುಕಾಗಿದೆ. ನೊಗ್ ರಾಜ್ ಮ್ಯಾನರಿಸಂಗೆ ಆ ಸಂಭಾಷಣೆ ಹೊಂದಿಕೊಂಡಿದೆ. ನೊಗ್ ರಾಜ್ ಪಾತ್ರವನ್ನು ಅವರು ಅಕ್ಷರಶಃ ಜೀವಿಸಿದ್ದಾರೆ. ಅವರ ಮಾತಿನ ಶೈಲಿ, ಮ್ಯಾನರಿಸಂ ಎಲ್ಲವೂ ಪಾತ್ರಕ್ಕೆ ಹೊಂದಿಕೊಂಡಿದೆ.”

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]