Saturday, September 19 , 2020
BREAKING NEWS
 
ಭಾರತದ ರಹಸ್ಯಗಳನ್ನು ಚೀನಾಕ್ಕೆ ಸೋರಿಕೆ ಮಾಡುತ್ತಿದ್ದ ರಾಜೀವ್ ಶರ್ಮಾ! ,          ಮದುವೆ ಮನೆಯಲ್ಲಿ ‘ಮಹಾನಾಯಕ’ ಫ್ಲೆಕ್ಸ್ | “ನಾವು ಬದಲಾದರೆ ಸಮಾಜ ಬದಲಾಗುತ್ತದೆ” ಎಂದ ಪ್ರೊ.ಹರಿರಾಮ್ ,          ಸೇತುವೆ ಕೊಚ್ಚಿ ಹೋಗಿ 30 ವರ್ಷವಾದರೂ ಸರ್ಕಾರ ನಿರ್ಮಿಸಲಿಲ್ಲ | ಸರ್ಕಾರಕ್ಕೆ ಮುಖಭಂಗವಾಗುವಂತೆ ತಾವೇ ಸೇತುವೆ ನಿರ್ಮಿಸಿದ ಗ್ರಾಮಸ್ಥರು ,          ಸೈಕಲ್ ನಲ್ಲಿ ತೆರಳಿದ್ದ ಬಾಲಕಿ ರಾತ್ರಿಯಾದರೂ ಬರಲಿಲ್ಲ! | ಬೆಳಗ್ಗೆ ಕಾದಿತ್ತು ಪೋಷಕರಿಗೆ ಶಾಕ್ | ಒಂದು ಮನಕರಗಿಸುವ ಘಟನೆ ,          ಕೊರೊನಾ ಹಾಟ್ ಸ್ಪಾಟ್ ಆದ ನಾಗಪುರದ ಆರೆಸ್ಸೆಸ್ ಕಚೇರಿ; 9 ಹಿರಿಯ ನಾಯಕರಿಗೆ ಕೋವಿಡ್ ಪಾಸಿಟಿವ್ ,          ಅಕುಲ್ ಬಾಲಾಜಿ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಮತ್ತಿನ ದಂಧೆ | ಸ್ಟಾರ್ ನಟರ ಮೋಜು ಮಸ್ತಿಯ ಪಾರ್ಟಿಯಲ್ಲಿ ಡ್ರಗ್ಸ್ ನದ್ದೇ ಕಾರುಬಾರು! ,         
ಪ್ರವಾಹ ಪೀಡಿತ ಪ್ರದೇಶಕ್ಕೆ ತಿರುಗಿಯೂ ನೋಡಲಿಲ್ಲ ಮೋದಿ | ಅಸಮರ್ಥ ಬಿಜೆಪಿ!

ಬೆಂಗಳೂರು(07.09.2019): ರಾಜ್ಯಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರೂ, ಪ್ರವಾಹ ಪೀಡಿತ ಜನರ ಕಡೆಗೆ ಮೋದಿ ತಿರುಗಿಯೂ ನೋಡಿಲ್ಲ ಎನ್ನುವ ಆಕ್ರೋಶ ಕೇಳಿ ಬಂದಿದೆ. ಉತ್ತರ ಕರ್ನಾಟಕ ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಉಂಟಾದ ಪ್ರವಾಹದಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು, ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಇನ್ನೂ ಸೂಕ್ತ ನೆರವೂ ದೊರಕಿಲ್ಲ. ಇಂತಹ ಸಂದರ್ಭದಲ್ಲಿ ಇಂದು ಕರ್ನಾಟಕಕ್ಕೆ ಆಗಮಿಸಿದ್ದ ಪಿಎಂ ಮೋದಿ ಪ್ರವಾಹ ಪೀಡಿತ ಸ್ಥಳಕ್ಕೆ ಭೇಟಿ ನೀಡಬಹುದು ಎನ್ನುವ ನಿರೀಕ್ಷೆಯೂ ಸುಳ್ಳಾಗಿದೆ ಎಂದು ವ್ಯಾಪಕ ಆಕ್ರೋಶ ಕೇಳಿ ಬಂದಿದೆ.

ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿಯ ನಾಯಕರು ಒಬ್ಬೊಬ್ಬರು ಒಂದೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪ್ರವಾಹ ಬಂದ ಸಂದರ್ಭದಲ್ಲಿಯೇ ಜನರು ಸೂಕ್ತ ವ್ಯವಸ್ಥೆಗಳಿಲ್ಲದೇ ಪರದಾಡಿದ್ದರು, ಪ್ರವಾಹ ಬಂದು ಇಷ್ಟು ದಿನಗಳು ಕಳೆದರೂ ಸಂತ್ರಸ್ತರಿಗೆ ನ್ಯಾಯವಾಗಿ ಸಿಗಬೇಕಾಗಿದ್ದ ಪರಿಹಾರ ಇನ್ನೂ ದೊರೆತಿಲ್ಲ. ಉತ್ತರ ಕರ್ನಾಟಕದಲ್ಲಿ ಹಲವು ಜನರು ತಮ್ಮ ಮನೆಗಳನ್ನು ಕಳೆದುಕೊಂಡಿದ್ದಾರೆ. ಇವರಿಗೆ ವಾಸಿಸಲು ಪ್ರತ್ಯೇಕ ವ್ಯವಸ್ಥೆಯೂ ಸರಕಾರದಿಂದಾಗಿಲ್ಲ. ಇಂತಹ ಸಂದರ್ಭ ರಾಜ್ಯದಲ್ಲಿದ್ದರೂ ರಾಜ್ಯವನ್ನು ಪ್ರತಿನಿಧಿಸಬೇಕಿದ್ದ ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಪ್ರಧಾನಿ ಮೋದಿ ಎದುರ ನಿಂತುಕೊಳ್ಳುವ ಧೈರ್ಯವನ್ನೂ ತೋರಿಸುತ್ತಿಲ್ಲ ಎಂದು ರಾಜ್ಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ.

ಇನ್ನೂ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದ ವಾಸ್ತವಾಂಶವನ್ನು ಹೇಳಿರುವ ಸಚಿವ ಜೆ.ಸಿ.ಮಾಧುಸ್ವಾಮಿ, ಪ್ರವಾಹದಿಂದಾಗಿ ರಾಜ್ಯದಲ್ಲಿ 32 ಸಾವಿರ ಕೋಟಿ ರೂಪಾಯಿಗಳಷ್ಟು ನಷ್ಟ ಸಂಭವಿಸಿದೆ. ನಷ್ಟದ ಬಗ್ಗೆ ನಾವು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಆದರೆ ಎನ್ ಡಿ ಆರ್ ಎಫ್ ನಿಯಮಾವಳಿಗಳ ಪ್ರಕಾರ ಇಷ್ಟೊಂದು ಮೊತ್ತದ ಪರಿಹಾರವನ್ನು ಪಡೆದುಕೊಳ್ಳುವ ಅರ್ಹತೆ ನಮಗಿಲ್ಲ. ಎನ್ ಡಿ ಆರ್ ಎಫ್ ನಿಯಮಾವಳಿಗಳ ಪ್ರಕಾರ ನಮಗೆ ಕೇವಲ 11 ಕೋಟಿ ರೂಪಾಯಿಗಳ ಪರಿಹಾರವನ್ನಷ್ಟೇ ಪಡೆದುಕೊಳ್ಳಬಹುದಾಗಿದೆ. ಹೀಗಿದ್ದರೂ ನಿಯಮಾವಳಿಗಳನ್ನು ಬದಿಗಿರಿಸಿ ನಮಗೆ ಹೆಚ್ಚಿನ ಪರಿಹಾರ ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ. ಹಾಗಾಗಿ ಸಂತ್ರಸ್ತರಿಗೆ ಪರಿಹಾರ ದೊರಕುವಾಗ ಸ್ವಲ್ಪ ಕಾಲಾವಕಾಶ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಮಾಧುಸ್ವಾಮಿ ಅವರು ಹೇಳುವಂತೆ ಪ್ರವಾಹದಿಂದಾಗಿ ರಾಜ್ಯದಲ್ಲಿ ಸಂಭವಿಸಿರುವ ನಷ್ಟದ ಕಾಲು ಭಾಗದಷ್ಟೂ ಎನ್ ಡಿ ಆರ್ ಎಫ್ ನಿಂದ ಪರಿಹಾರ ಸಿಗುವುದಿಲ್ಲ. ನನ್ನ ಇಲಾಖೆಯಡಿಯಲ್ಲೇ  454 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ. ಹೀಗಾಗಿ ಎನ್ ಡಿ ಆರ್ ಎಫ್ ನಿಯಮಗಳನ್ನು ಬಿಟ್ಟು ರಾಜ್ಯಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇನ್ನೂ ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ ಬಳಿಕ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ,  ಪ್ರಧಾನಿಯವರಿಗೆ ರಾಜ್ಯದ ಪರಿಸ್ಥಿತಿ ವಿವರಿಸಲಾಗಿದೆ. ಶೀಘ್ರವೇ ಪರಿಹಾರ ಬಿಡುಗಡೆಯ ನಿರೀಕ್ಷೆಯಲ್ಲಿದ್ದೇವೆ. ರಾಜ್ಯ ಸರ್ಕಾರದಿಂದ ಬೇರೆಲ್ಲಾ ಕೆಲಸಗಳನ್ನು ಬದಿಗೊತ್ತಿ ಅತಿವೃಷ್ಟಿ ಪರಿಹಾರಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರಕಾರವೇ ಇದ್ದರೂ ರಾಜ್ಯ ಬಿಜೆಪಿ ನಾಯಕರು ಪ್ರವಾಹ ಪರಿಹಾರ ತರಲು ವಿಫಲರಾಗಿದ್ದಾರೆ. ಪ್ರವಾಹ ಬಂದು ಇಷ್ಟು ಸಮಯ ಕಳೆದರೂ ಸಂತ್ರಸ್ತರ ಪ್ರಾಥಮಿಕ ಅವಶ್ಯಕತೆಗಳನ್ನೂ ಪೂರೈಸಲು ರಾಜ್ಯ ಸರಕಾರ ವಿಫಲರಾಗಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದರೂ ಪ್ರವಾಹ ಪೀಡಿತ ಪ್ರದೇಶಗಳತ್ತ ತಿರುಗಿಯೂ ನೋಡಿಲ್ಲ. ಈ ಎಲ್ಲ ವಿಚಾರಗಳು ರಾಜ್ಯದಲ್ಲಿ ಬಿಜೆಪಿ ವಿರುದ್ಧ ಆಕ್ರೋಶವನ್ನುಂಟು ಮಾಡಿದೆ. ಜೊತೆಗೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವರುಗಳು ಆಗಮಿಸಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರೇ ಬಂದು ವೀಕ್ಷಣೆ ಮಾಡಬೇಕಾಗಿಲ್ಲ ಎನ್ನುವ ಬಿಜೆಪಿ ಮುಖಂಡರ ಹೇಳಿಕೆಗಳು ರಾಜ್ಯದ ಜನರ ಗಾಯದ ಮೇಲೆ ಉಪ್ಪು ಹಾಕಿರುವಂತಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]