Saturday, June 15 , 2019
ಬಡ ಮಕ್ಕಳ ಇಂಗ್ಲಿಷ್ ಮಾಧ್ಯಮ ಕಲಿಕೆಗೆ ಅಡ್ಡಗಾಲಿಟ್ಟ ಸಿದ್ದರಾಮಯ್ಯ | ಇದು ಒಳ್ಳೆಯ ಬೆಳವಣಿಗೆಯಲ್ವಂತೆ!

ಮೈಸೂರು(22.05.2019): ಬಡಮಕ್ಕಳಿಗೆ ನರ್ಸರಿ ಶಾಲೆ ಆರಂಭಿಸಬೇಕು ಎನ್ನುವ ರಾಜ್ಯ ಸರಕಾರದ ಯೋಜನೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅಡ್ಡಗಾಲಿಟ್ಟಿದ್ದು, ಸರಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ತೆರೆಯುವುದಕ್ಕೆ ನನ್ನ ವಿರೋಧವಿದೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಮೈಸೂರಿನ ನೃಪತುಂಗ ಕನ್ನಡ ಮಾಧ್ಯಮ, ಇಂಗ್ಲಿಷ್ ಪದವಿ ಪೂರ್ವ ಕಾಲೇಜು ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಫೋಷಕರಿಗೆ ಇಂಗ್ಲಿಷ್ ಮಾಧ್ಯಮದ ವ್ಯಾಮೋಹ ಇದೆ. ಆರ್ಥಿಕವಾಗಿ ಹಿಂದುಳಿದವರೂ(ಬಡವರು) ತಮ್ಮ ಮಕ್ಕಳು ಇಂಗ್ಲಿಷ್ ಶಾಲೆಯಲ್ಲಿ ಕಲಿಯಲಿ ಎಂದು ಆಸೆಪಡುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಇಂಗ್ಲಿಷ್ ನ್ನು ಒಂದು ಭಾಷೆಯಾಗಿ ಕಲಿಯಲು ಯಾರ ವಿರೋಧವೂ ಇಲ್ಲ. ಆದರೆ ಸರಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತೆರೆಯಲು ನನ್ನ ವಿರೋಧವಿದೆ. ಕನ್ನಡ ಭಾಷೆ, ನೆಲ, ಜಲದ ವಿಚಾರದಲ್ಲಿ ನಾವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿರುವುದು ವರದಿಯಾಗಿದೆ.

ಎನ್.ಮಹೇಶ್ ಶಿಕ್ಷಣ ಸಚಿವರಾಗಿದ್ದಾಗ, ಸರಕಾರಿ ಶಾಲಾ ಮಕ್ಕಳ ಕೌಶಲ್ಯಾಭಿವೃದ್ಧಿಗಾಗಿ ಮತ್ತು ಅವರು ಖಾಸಗಿ ಶಾಲಾ ಮಕ್ಕಳಿಗೆ ಸರಕಾರಿ ಶಾಲಾ ಸ್ಪರ್ಧೆ ನೀಡುವಂತಾಗಬೇಕು. ಬಡ ಮಕ್ಕಳಿಗೂ ಉದ್ಯೋಗಕ್ಕೆ ಆವಶ್ಯಕವಾಗಿರುವ ಇಂಗ್ಲಿಷ್ ಶಿಕ್ಷಣ ಸಿಗಬೇಕು ಎಂದು ಆಗ್ರಹಿಸಿದ್ದರು. ಈ ಸಂಬಂಧ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೊತೆಗೂ ಹಲವು ಬಾರಿ ಮಾತನಾಡಿದ್ದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ಕುಮಾರಸ್ವಾಮಿ ಕೊನೆಗೂ ಈ ಮಹತ್ವದ ಯೋಜನೆಯ ಜಾರಿಗೆ ಸಮ್ಮತಿ ಸೂಚಿಸಿದ್ದರು. ಇದೀಗ ಬಡಮಕ್ಕಳಿಗೆ ದೊರೆತಿರುವ ಈ ಅಮೂಲ್ಯ ಅವಕಾಶಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅಡ್ಡಗಾಲು ಇರಿಸಿದ್ದು, ಬಡವರ ಮಕ್ಕಳು ಕೇವಲ ಕನ್ನಡ ಮಾಧ್ಯಮದಲ್ಲಿ ಮಾತ್ರ ಕಲಿಯ ಬೇಕು ಎನ್ನುವ ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ಅವರ ನಿಲುವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...