Friday, August 23 , 2019
ಭಾರತೀಯರಾದ ಜಿ.ಎಸ್‌.ಲಕ್ಷ್ಮಿ ಐಸಿಸಿಯ ಮೊದಲ ಮಹಿಳಾ ರೆಫ್ರಿ

ದುಬೈ(15/05/2019): ಭಾರತೀಯರಾದ ಜಿ.ಎಸ್‌.ಲಕ್ಷ್ಮಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ)ಯ ಮ್ಯಾಚ್‌ ರೆಫ್ರಿ ಸಮಿತಿಗೆ ಸೇರ್ಪಡೆಗೊಂಡ ಮೊದಲ ಮಹಿಳೆ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೇವಲ ಮಹಿಳೆಯರ ಪಂದ್ಯಗಳಲ್ಲಿ ಮಾತ್ರವಲ್ಲ; ಪುರುಷರ ಅಂತಾರಾಷ್ಟ್ರೀಯ ಪಂದ್ಯಗಳಲ್ಲೂ ಅವರು ರೆಫ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಐಸಿಸಿ ಮೂಲಗಳು ತಿಳಿಸಿವೆ

51 ವರ್ಷದ ಲಕ್ಷ್ಮಿ ಮೂಲತಃ ಆಂಧ್ರ ಪ್ರದೇಶದವರು.  ಭಾರತ ಪರ ಕ್ರಿಕೆಟ್‌ ಆಡಿದ ಅನುಭವವೂ ಅವರಿಗಿದೆ. ಜೊತೆಗೆ  ಅಂಪೈರ್‌ ಆಗಿಯೂ ಅವರು ಕೆಲಸ ಮಾಡಿದ್ದಾರೆ. 2008-09ರಲ್ಲಿ ದೇಸಿ ಟೂರ್ನಿಗಳಲ್ಲಿ ಮ್ಯಾಚ್‌ ರೆಫ್ರಿಯಾಗಿದ್ದ ಅವರು, 3 ಮಹಿಳಾ ಏಕದಿನ ಹಾಗೂ 3 ಮಹಿಳಾ ಟಿ20 ಪಂದ್ಯಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಕಳೆದ ತಿಂಗಳಷ್ಟೇ ಪುರುಷರ ಪಂದ್ಯದಲ್ಲಿ ಅಂಪೈರ್‌ ಆಗಿ ಕಾರ್ಯನಿರ್ವಹಿಸಿದ ಮೊದಲ ಮಹಿಳೆ ಎನ್ನುವ ಖ್ಯಾತಿಯನ್ನು ಆಸ್ಪ್ರೇಲಿಯಾದ ಕ್ಲಾರಿ ಪೊಲೊಸಾಕ್‌ ಪಡೆದುಕೊಂಡಿದ್ದರು. ಇದೀಗ ಲಕ್ಷ್ಮಿ ಐಸಿಸಿಯ ಮ್ಯಾಚ್‌ ರೆಫ್ರಿ ಸಮಿತಿಗೆ ಸೇರ್ಪಡೆಗೊಂಡ ಮೊದಲ ಮಹಿಳೆ ಎನ್ನುವ ಖ್ಯಾತಿ ತಮ್ಮದಾಗಿಸಿಕೊಂಡಿದ್ದಾರೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]