Thursday, December 12 , 2019
ಮಂಡ್ಯ ಜಿಲ್ಲೆಯ 5 ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡ ನಟ ಪ್ರಕಾಶ್ ರೈ

ಮಂಡ್ಯ(12-06-2018): ಬಹುಭಾಷಾ ನಟ ಪ್ರಕಾಶ್ ರೈ ಮಂಡ್ಯ ಜಿಲ್ಲೆಯ 5 ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡಿದ್ದು, ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಮೆಣಸಗೆರೆ ಸರಕಾರಿ ಶಾಲೆ, ಕೆ.ಆರ್ ಪೇಟೆಯ ಶತಮಾನದ ಶಾಲೆ, ಪಾಂಡವಪುರದ ಫ್ರೆಂಚ್ ರಾಕ್ಸ್ ಸರ್ಕಾರಿ ಮಾದರಿ ಶಾಲೆ ಸೇರಿದಂತೆ ಐದು ಶಾಲೆಗಳನ್ನು ಪ್ರಕಾಶ್ ರೈ ದತ್ತು ತೆಗೆದುಕೊಂಡಿದ್ದು, ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ಶಾಲೆಗಳನ್ನು ದತ್ತು ತೆಗೆದುಕೊಂಡಿದ್ದಾಗಿ ಹೇಳಿದ್ದಾರೆ, ಇವರ ಜೊತೆಗೆ ಪ್ರಕಾಶ್ ರೈ ರವರ ‘ಜಸ್ಟ್ ಆಸ್ಕಿಂಗ್ ಫೌಂಡೇಶನ್’ ಕೂಡ ಕೈಜೋಡಿಸಿದೆ.

ಈ ಕುರಿತು ಮಾತನಾಡಿದ ಪ್ರಕಾಶ್ ರೈ, ತಾಂತ್ರಿಕವಾಗಿ ಯಾವುದೇ ಶಾಲೆಗಳನ್ನು ದತ್ತು ತೆಗೆದುಕೊಳ್ಳುತ್ತಿಲ್ಲ. ದತ್ತು ತೆಗೆದುಕೊಂಡರೆ ಆಗ ಊರಿನ ಸಮುದಾಯಕ್ಕೆ ಹೆಚ್ಚಿನ ಪಾತ್ರವಿರುವುದಿಲ್ಲ. ಆದ್ದರಿಂದ ಊರಿನ ಸಮುದಾಯವೇ ಶಾಲೆಯ ಅಭಿವೃದ್ಧಿಯ ಜವಾಬ್ಧಾರಿಯನ್ನು ಮಾಡಬೇಕು. ಅವರಿಗೆ ಬೇಕಾಗುವ ಸಕಲ ನೆರವನ್ನು ಕೂಡ ತಾನು ನೀಡುತ್ತೇನೆ ಎಂದು ಹೇಳಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]