Saturday, September 21 , 2019
ಮತಯಂತ್ರ ಸಮಸ್ಯೆ ಸಾಬೀತುಪಡಿಸದಿದ್ದಲ್ಲಿ ಶಿಕ್ಷೆ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಹೊಸದೆಹಲಿ(29/04/2019): ಮತ ಯಂತ್ರದಲ್ಲಿನ ದೋಷವನ್ನು ಆರೋಪಿಸಿ, ಸಾಬೀತುಪಡಿಸದಿದ್ದಲ್ಲಿ ದೂರುದಾರನಿಗೆ ಶಿಕ್ಷೆ ವಿಧಿಸುವ ಕಾನೂನನ್ನು ತೆಗೆದು ಹಾಕಬೇಕೆಂದು ಆಗ್ರಹಿಸಿ  ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ.

ಸುನಿಲ್ ಅಹಯ್ಯಾ ಎಂಬವರು ನೀಡಿರುವ ಅರ್ಜಿಯನ್ನು ಪರಿಗಣಿಸಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಚುನಾವಣಾ ಆಯೋಗಕ್ಕೆ ನೋಟಿಸ್ ಕಳುಹಿಸಿದೆ.

ಒಬ್ಬ ಅಭ್ಯರ್ಥಿಗೆ ಮತ ಚಲಾಯಿಸಿದರೆ ಅದು ಇನ್ನೊಬ್ಬ ಅಭ್ಯರ್ಥಿಯ ಖಾತೆಗೆ ಹೋಗುತ್ತಿದೆ ಎಂದು ದೂರು ನೀಡಿದರೆ ಸಾಲದು ಅದನ್ನು ಪುರಾವೆ ಸಮೇತ ಸಾಬೀತುಪಡಿಸಬೇಕು. ಇಲ್ಲದಿದ್ದಲ್ಲಿ ಚುನಾವಣಾ ನೀತಿ ಸಂಹಿತೆಯ 49ನೇ ಕಲಂ ಪ್ರಕಾರ ಅದು ಶಿಕ್ಷಾರ್ಹ ಅಪರಾಧವಾಗಿದೆ.  ಕ್ರಿಮಿನಲ್ ನಿಯಮ 177ನೇ ಕಲಂ ಪ್ರಕಾರ, ಪೊಲೀಸರು ದೂರುದಾರನ ವಿರುದ್ಧ ಪ್ರಕರಣ ದಾಖಲಿಸಬಹುದು. ಆರು ತಿಂಗಳು ಜೈಲು ಶಿಕ್ಷೆ ಅಥವಾ 1000 ರುಪಾಯಿ ದಂಡ ವಿಧಿಸಬಹುದು.

ಈ ನಿಯಮವು ಮತದಾನದ ವೇಳೆ ನಡೆಯುವ ಹಗರಣಗಳನ್ನು ಬಯಲಿಗೆಳೆಯುವಲ್ಲಿ ತಡೆಯುತ್ತದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.  ತಾನು ಮತ ಹಾಕಿದ ಅಭ್ಯರ್ಥಿಗೆ ಮತ ಬಿದ್ದಿಲ್ಲ ಎಂದು ವಿವಿಪ್ಯಾಟ್ ನೋಡಿ ಹೇಳಿದ್ದ ತಿರುವನಂತಪುರಂ ಜಿಲ್ಲೆಯ ಎಬಿ ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಎಬಿಗೆ ತನ್ನ ಆರೋಪವನ್ನು ಸಾಬೀತುಪಡಿಸಲು ಸಾಧ್ಯವಾಗದಿರುವುದೇ ಆತನ ವಿರುದ್ಧ ಪ್ರಕರಣ ದಾಖಲಿಸಲು ಕಾರಣವಾಗಿದೆ. ಇದಲ್ಲದೆ, ದೇಶದ ವಿವಿಧ ಭಾಗಗಳಿಂದ ಇಂತಹ ಘಟನೆಗಳು ಸುದ್ದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಸುನಿಲ್ ಅಹಯ್ಯಾ ಕೋರ್ಟ್ ಮೆಟ್ಟಿಲೇರಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]