Saturday, June 15 , 2019
ಮಲ್ಲಿಕಾರ್ಜುನ ಖರ್ಗೆ ಮುಗಿದ ಕಥೆ | ಸಂಸದ ಉಮೇಶ್ ಜಾಧವ್

ಬೆಂಗಳೂರು(24.05.2019): ಮಲ್ಲಿಕಾರ್ಜುನ ಖರ್ಗೆ ಮುಗಿದ ಕಥೆ, ಆ ಬಗ್ಗೆ ಇನ್ನು ಮಾತನಾಡಬಾರದು ಎಂದು ಸಂಸದ ಉಮೇಶ್ ಜಾಧವ್ ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಬಿ.ಎಸ್.ಯಡಿಯೂರಪ್ಪ ಅವರು ನನ್ನ ಮೇಲೆ ಇರಿಸಿದ್ದ ನಂಬಿಕೆಯನ್ನು ನಾನು ಉಳಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

ತಮ್ಮ ಗೆಲುವಿನ ಬಳಿಕ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಸೋಲಿಲ್ಲದ ಸರದಾರ. 11 ಬಾರಿ ಚುನಾವಣೆಯಲ್ಲಿ ಗೆದ್ದವರು. ನನ್ನ ಮೇಲೆ ಭರವಸೆಯಿಟ್ಟು ಯಡಿಯೂರಪ್ಪನವರು ಕಲಬುರಗಿಯಿಂದ ಸ್ಪರ್ಧಿಸಲು ಅವಕಾಶ ನೀಡಿದರು. ಯಡಿಯೂರಪ್ಪ ಅವರ ನಂಬಿಕೆ ನಾನು ಉಳಿಸಿಕೊಂಡಿದ್ದೇನೆ ಎಂದು ಅವರು ಹೇಳಿದರು.

ಸಿಎಂ ಕುಮಾರಸ್ವಾಮಿ ಅವರು ಇಂದು ಸಂಜೆ ರಾಜೀನಾಮೆ ನೀಡುತ್ತಾರೆ ಎನ್ನುವ ಭರವಸೆ ನನಗಿದೆ ಎಂದ ಅವರು, ಬಿಜೆಪಿಗೆ ನನ್ನ ಸ್ನೇಹಿತರಿಗೆ ಬರುವ ಅವಕಾಶವಿದೆ ಎಂದು ಕಾಂಗ್ರೆಸ್ ನ ರೆಬೆಲ್ ಶಾಸಕರನ್ನು ಆಹ್ವಾನಿಸಿದ ಅವರು, ಸಚಿವ ಸ್ಥಾನದ ಮೇಲೆ ನನಗೆ ಆಸೆಯೇನೂ ಇಲ್ಲ, ಕೊಟ್ಟರೆ ನಿಭಾಯಿಸುತ್ತೇನೆ ಎಂದು ಪರೋಕ್ಷ ಹೇಳಿಕೆ ನೀಡಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...