Thursday, December 12 , 2019
ಮಹಾರಾಷ್ಟ್ರ ಸರಕಾರ ರಚನಾ ಹೈಡ್ರಾಮ; ಸೋನಿಯಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಮಹತ್ವದ ಬೆಳವಣಿಗೆ

ಮುಂಬೈ(21-11-2019): ಮಹಾರಾಷ್ಟ್ರದಲ್ಲಿ ಸರಕಾರ ರಚನೆಯ ಬಿಕ್ಕಟ್ಟು ಕೊನೆಗೊಳ್ಳುವ ಸಾಧ್ಯತೆ ಇದ್ದು, ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸದಲ್ಲಿ ಈ ಕುರಿತು ಹಿರಿಯ ಕಾಂಗ್ರೆಸ್ ನಾಯಕರು ಸಭೆ ಸೇರಿದ್ದು, ಎನ್ ಸಿಪಿ- ಶಿವಸೇನೆ- ಕಾಂಗ್ರೆಸ್ ಮಹಾ ಸರಕಾರ ರಚನೆ ಬಗ್ಗೆ ಚರ್ಚೆ ನಡೆಸಿದ್ದಾರೆ.

ಬಳಿಕ ಮಾತನಾಡಿದ ಕೆ.ಸಿ ವೇಣುಗೋಪಾಲ್ ಈ ಕುರಿತು ನಾಳೆ ಮುಂಬೈನಲ್ಲಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಮಹಾರಾಷ್ಟ್ರದ ಬಗ್ಗೆ ಅಂತಿಮ ತೀರ್ಮಾನವನ್ನು ಶುಕ್ರವಾರದೊಳಗೆ ನಿರೀಕ್ಷಿಸಲಾಗಿದೆ ಎನ್ನುವುದಾಗಿದೆ. ಆದರೆ ಕಾಂಗ್ರೆಸ್ ಮೂಲಗಳು ಪ್ರಕಾರ, ಸಿಡಬ್ಲ್ಯುಸಿ ಸಭೆಯಲ್ಲಿ ಶಿವಸೇನೆ ಮತ್ತು ಎನ್‌ಸಿಪಿ ಜೊತೆ ಸರ್ಕಾರ ರಚನೆಗೆ ಸಮ್ಮತ ವ್ಯಕ್ತವಾಗಿದೆ ಎನ್ನಲಾಗಿದೆ.

ನಿನ್ನೆ ಎನ್ ಸಿಪಿ ಜೊತೆಗಿನ ಸಭೆಯ ಬಳಿಕ ಕೆಲವು ವಿಚಾರಗಳ ಬಗ್ಗೆ ಇನ್ನಷ್ಟೇ ಚರ್ಚೆ ಮಾಡಬೇಕಿದೆ ಎಂದು ಕಾಂಗ್ರೆಸ್ ಹೇಳಿತ್ತು. ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಇಲ್ಲದೆ ಮಹಾರಾಷ್ಟ್ರದಲ್ಲಿ ಯಾವುದೇ ಸರ್ಕಾರ ರಚಿಸಲು ಸಾಧ್ಯವಿಲ್ಲ. ಸಮಸ್ಯೆಗಳನ್ನು ಪರಿಹರಿಸಲು ನಾವು ನಮ್ಮ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದೇವೆ ಎಂದು ಎನ್ ಸಿಪಿ ನಾಯಕ ನವಾಬ್ ಮಲಿಕ್ ಮತ್ತು ಕಾಂಗ್ರೆಸ್ ಮುಖಂಡ ಪೃಥ್ವಿರಾಜ್ ಚವಾಣ್ ನಿನ್ನೆ ಹೇಳಿಕೆಯನ್ನು ನೀಡಿದ್ದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]