Thursday, December 12 , 2019
ಮಾಲೆಂಗಾವ್ ಸ್ಪೋಟದಲ್ಲಿ ಜೈಲಿನಲ್ಲಿದ್ದ ಸಂಸದೆ ಪ್ರಜ್ಞಾ ಸಿಂಗ್ ರಕ್ಷಣಾ ಸಮಿತಿಗೆ ನೇಮಕ!

ನವದೆಹಲಿ(21-11-2019): ಮಾಲೆಂಗಾವ್ ಬಾಂಬ್ ಸ್ಪೋಟದಲ್ಲಿ ಜೈಲುವಾಸವನ್ನು ಅನುಭವಿಸಿದ್ದ ಭೋಪಾಲ್ ನ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ನಾಮಕರಣ ಮಾಡಲಾಗಿದೆ.

ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಸಾದ್ವಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ಅವರನ್ನು ಸೋಲಿಸಿ ಸಂಸದೆಯಾಗಿ ಆಯ್ಕೆಯಾಗಿದ್ದರು.

ರಾಷ್ಟ್ರೀಯ ತನಿಖಾ ಸಂಸ್ಥೆ ಸಾಧ್ವಿ ವಿರುದ್ಧದ ಆರೋಪಗಳನ್ನು ಕೈಬಿಟ್ಟ ನಂತರ ಆರೋಗ್ಯ ಕಾರಣಗಳಿಗಾಗಿ ಬಾಂಬೆ ಹೈಕೋರ್ಟ್‌ನಿಂದ 2017 ರ ಏಪ್ರಿಲ್‌ನಲ್ಲಿ ಆಕೆಗೆ ಜಾಮೀನು ನೀಡಲಾಯಿತು. ಅವರು ಪ್ರಸ್ತುತ ಕಾನೂನುಬಾಹಿರ ಚಟುವಟಿಕೆಗಳು ಸೇರಿದಂತೆ ಅನೇಕ ಆರೋಪಗಳಿಗೆ ಸಂಬಂಧಿಸಿದಂತೆ ವಿಚಾರಣೆಯಲ್ಲಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ 21 ಸದಸ್ಯರ ಸಂಸದೀಯ ಸಮಾಲೋಚನಾ ಸಮಿತಿಯನ್ನು ರಚಿಸಲಾಗಿದೆ. ಇದರಲ್ಲಿ ಸಾದ್ವಿ ಕೂಡ ಸದಸ್ಯತ್ವವನ್ನು ಪಡೆದುಕೊಂಡು ಅಚ್ಚರಿಯನ್ನು ಮೂಡಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]