Tuesday, October 22 , 2019
ಮೇಲೊಬ್ಬ ಮಾಯಾವಿ ಚಿತ್ರದ ಟೀಸರ್ ಬಿಡುಗಡೆ

ರಾಷ್ಟ್ರಪ್ರಶಸ್ತಿ ವಿಜೇತ ನಟ ‘ಸಂಚಾರಿ ವಿಜಯ್’ ಅಭಿನಯದ ಬಹು ನಿರೀಕ್ಷಿತ ‘ಮೇಲೊಬ್ಬ ಮಾಯಾವಿ’ ಚಿತ್ರದ ಟೀಸರ್ ಇಂದು ಬಿಡುಗಡೆಯಾಗಿದೆ. ಟೀಸರ್ ನ ದೃಶ್ಯಗಳು ಚಿತ್ರದ ಬಗ್ಗೆ ಬಹಳ ಕುತೂಹಲ ಹುಟ್ಟಿಸುವಂತಿದ್ದು, ಅತ್ಯುತ್ತಮ ಹಿನ್ನೆಲೆ ಸಂಗೀತ, ಛಾಯಾಗ್ರಹಣದ ಜಲಕ್ ನೋಡುಗರನ್ನು ಆಕರ್ಷಿಸುವಂತಿದೆ.

ಸಂಚಾರಿ ವಿಜಯ್ ಅವರು ಪ್ರತೀ‌ ಚಿತ್ರದಲ್ಲಿ ಸಹ ವಿಭಿನ್ನ ಪಾತ್ರವನ್ನು ಆಯ್ಕೆ ಮಾಡಿಕೊಂಡು ನಟಿಸುತ್ತಾರೆ. ಇತ್ತೀಚೆಗೆ ಅವರ ನಟನೆಯ ‘ನಾತಿಚರಾಮಿ’ ಚಿತ್ರ ರಾಷ್ಟ್ರಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿತ್ತು. ಈ ಚಿತ್ರದಲ್ಲಿ ಸಹ ಒಂದು ವಿಭಿನ್ನ ಪಾತ್ರದಲ್ಲಿ ಸಂಚಾರಿ ವಿಜಯ್ ಅವರು ನಟಿಸಿದ್ದು ಟೀಸರ್ ದೃಶ್ಯಗಳಲ್ಲಿ ಯಕ್ಷಗಾನದ ವೇಷದಲ್ಲಿ, ಮಾಂತ್ರಿಕನ ಶೈಲಿಯ ವೇಷದಲ್ಲಿ ಕಾಣಿಸಿದ್ದು, ಪಾತ್ರದ ಬಗ್ಗೆ ಕುತೂಹಲ ಹೆಚ್ಚಿಸಿದ್ದಾರೆ.

ನಾಯಕಿಯಾಗಿ ಅನನ್ಯ ಶೆಟ್ಟಿ ಅಭಿನಯಿಸುತ್ತಿದ್ದು, ಪತ್ರಕರ್ತ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಬಿ.ನವೀನ್ ಕೃಷ್ಣ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು ಪುತ್ತೂರು ಭರತ್ ಮತ್ತು ತನ್ವಿ ಅಮಿನ್‌ ಕೊಲ್ಯ ನಿರ್ಮಾಣ ಮಾಡುತ್ತಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]