Friday, August 23 , 2019
ರಾಜ್ಯದಲ್ಲಿ ಬರ ಪರಿಸ್ಥಿತಿ; ಮುಖ್ಯಮಂತ್ರಿಯಿಂದ ವಿಡಿಯೋ ಕಾನ್ಫರೆನ್ಸ್

ಬೆಂಗಳೂರು(15/05/2019): ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು  ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ವೇಳೆ ಕಲಬುರಗಿ ಮತ್ತು ಧಾರವಾಡ ಜಿಲ್ಲೆಗಳು ಭಾಗವಹಿಸಿರಲಿಲ್ಲ.

ತೀವ್ರ ಬರ ಪರಿಸ್ಥಿತಿಯಿಂದ ರಾಜ್ಯದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಇದನ್ನು ನಿವಾರಿಸಲು ಜಿಲ್ಲೆಯಲ್ಲಿ ಯಾವ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರು, ಜಾನುವಾರಗಳಿಗೆ ಮೇವಿನ ಕೊರತೆ ನೀಗಿಸಲು ಕೈಗೊಂಡ ಕ್ರಮದ ಬಗ್ಗೆ ಅಧಿಕಾರಿಗಳಿಂದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮಾಹಿತಿ ಪಡೆದರು.

ವೀಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ಪಡೆದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಆಯಾ ಜಿಲ್ಲಾಧಿಕಾರಿಗಳಿಗೆ, ತಕ್ಷಣವೇ ಬರ ಪರಿಹಾರದ ಬಗ್ಗೆ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರು ಸೇರಿದಂತೆ ಇತರೆ ವ್ಯವಸ್ಥೆಗಳನ್ನು ರಾಜ್ಯದ ಜನರಿಗೆ ಒದಗಿಸುವಂತೆ ಸೂಚನೆ ನೀಡಿದರು..

ಈ ವೀಡಿಯೋ ಕಾನ್ಫೆರೆನ್ಸ್ ನಲ್ಲಿ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]