Sunday, May 31 , 2020
ವಿಜಯಾ ಬ್ಯಾಂಕ್ ವಿಲೀನ; ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ವಿಜಯಾ ಬ್ಯಾಂಕನ್ನು ಬ್ಯಾಂಕ್ ಆಫ್ ಬರೋಡ ಹಾಗೂ ದೇನಾ ಬ್ಯಾಂಕ್ ನೊಂದಿಗೆ ವಿಲೀನ ಮಾಡುವ ಮೋದಿ ಸರಕಾರದ ನಿರ್ಧಾರಕ್ಕೆ ಜಿಲ್ಲೆಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ.

ಇಂದು ಮಂಗಳೂರಿನಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಕೇಂದ್ರದ ನಿರ್ಧಾರದ ವಿರುದ್ಧ ಪ್ರತಿಭಟನೆ ದಾಖಲಿಸಿತು. ಮಲ್ಲಿಕಟ್ಟೆಯಲ್ಲಿರುವ ವಿಜಯಾ ಬ್ಯಾಂಕ್ ಶಾಖೆಯ ಮುಂಭಾಗದಲ್ಲಿ ಜಮಾಯಿಸಿದ ಮಾಜಿ ಸಚಿವ ಬಿ.ರಮಾನಾಥ ರೈ, ದ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ, ಮಾಜಿ ಶಾಸಕರಾದ ಜೆ.ಆರ್.ಲೋಬೋ ಸೇರಿದಂತೆ  ಕಾಂಗ್ರೆಸ್ ನ ವಿವಿಧ  ನಾಯಕರು ಹಾಗೂ ಕಾರ್ಯಕರ್ತರು  ಮೋದಿ ಸರಕಾರದ ನಿರ್ಧಾರದ ವಿರುದ್ಧ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿತು.

ವಿಜಯಾ ಬ್ಯಾಂಕ್ ಲಾಭದಲ್ಲಿದ್ದರೂ,  ಕೇಂದ್ರ ಸರಕಾರ ನಷ್ಟದಲ್ಲಿರುವ ಬ್ಯಾಂಕ್ ಆಫ್ ಬರೋಡ ಹಾಗೂ ದೇನಾ ಬ್ಯಾಂಕ್ ನ ಜೊತೆಗೆ ವಿಲೀನ ಮಾಡುವುದರ ಹಿಂದೆ ದುರುದ್ದೇಶ ಇರುವಂತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]