Friday, August 23 , 2019
ಶಾಕಿಂಗ್ ನ್ಯೂಸ್; ಆರ್ ಬಿಐ ಗೆ 8 ಲಕ್ಷಕ್ಕೂ ಅಧಿಕ ನಕಲಿ ನೋಟು ಜಮೆಮಾಡಿದ ಬ್ಯಾಂಕ್ ಗಳು!

ಬೆಂಗಳೂರು(24-08-2018): ಆರ್ ಬಿಐ ಗೆ ಈ ಬಾರಿ ಎಂಟು ಲಕ್ಷಕ್ಕೂ ಅಧಿಕ ಬೆಲೆಯ ನಕಲಿ ನೋಟುಗಳನ್ನು ಜಮೆ ಮಾಡಲಾಗಿದ್ದು, ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ.

ಹಲಸೂರು ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಆರ್ ಬಿಐ ವ್ಯವಸ್ಥಾಪಕರಾದ ಉಷಾ ನಂಬೀಷನ್ ಪ್ರಕರಣವನ್ನು ದಾಖಲಿಸಿದ್ದು, ಆರೋಪಿಗಳನ್ನು ಪತ್ತೆ ಹಚ್ಚುವಂತೆ ಆಗ್ರಹಿಸಿದ್ದಾರೆ.

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಭಾರತೀಯ ರಿಸರ್ವ್‌ ಬ್ಯಾಂಕ್‌ನಲ್ಲಿ ಒಂದು ಸಾವಿರ ರೂ. ನೋಟುಗಳು ಹಾಗೂ 500 ರೂ ಮುಖಬೆಲೆಯ 8,54,500 ರೂ ಮೌಲ್ಯದ ನಕಲಿ ನೋಟುಗಳು ಜಮೆ ಆಗಿದೆ. ಇದು ನಕಲಿಯಾಗಿದೆ ಎಂದು ಉಷಾ ನಂಬೀಷನ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಬ್ಯಾಂಕ್‌ ಆಫ್‌ ಬರೋಡಾ ಹಾಗೂ ಇತರೆ ಇಪ್ಪತ್ತೈದು ಬ್ಯಾಂಕ್ ಗಳ ಕರೆನ್ಸಿ ಚೆಸ್ಟ್ ಶಾಖೆಗಳಿಂದ ಆರ್ ಬಿಐಗೆ ಈ ಹಣ ಜಮೆಯಾಗಿದೆ ಎನ್ನಲಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]