Friday, August 23 , 2019
ಶ್ರೀಲಂಕಾದಲ್ಲಿ ಮುಸ್ಲಿಮರ ಮೇಲೆ ದಾಳಿ; ಓರ್ವ ಮೃತ್ಯು

ಕೊಲಂಬೊ (14-05-2019): ಭೀಕರ ಭಯೋತ್ಪಾದಕ ದಾಳಿಯ ಬಳಿಕ ಶ್ರೀಲಂಕಾದಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಈಗಾಗಲೇ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಅಂಗಡಿ ಮುಂಗಟ್ಟುಗಳನ್ನು ಧ್ವಂಸಗೊಳಿಸಲಾಗಿದೆ.

ಶ್ರೀಲಂಕಾದಲ್ಲಿ ಕರ್ಫ್ಯೂ ಮಧ್ಯೆ  ಕುಲಿಯಪಿತಿಯಾ, ಬಿಂಗಿರಿಯಾ, ದುಮ್ಮಲ ಸುರಿಯಾ ಮತ್ತು ಹೆಟ್ಟಿಪೋಲಾ ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಮುಸ್ಲಿಂರ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಪುಟ್ಟಲಂ ಜಿಲ್ಲೆಯಲ್ಲಿ 45ರ ಹರೆಯದ ವ್ಯಕ್ತಿ ಅಮೀರ್ ಎಂಬವರನ್ನು ಗುಂಪೊಂದು ಮಾರಕಾಯುಧಗಳಿಂದ ಕೊಚ್ಚಿ ಕೊಲೆ ಮಾಡಿದೆ.

ನೂರಾರು ಸಂಖ್ಯೆಯ ಉದ್ರಿಕ್ತರ ಗುಂಪು ಸತತವಾಗಿ ಮುಸ್ಲಿಮರ ಮನೆ ಹಾಗೂ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸುತ್ತಿದ್ದಾರೆ. ಆದರೆ, ಪೊಲೀಸರು ಹಾಗೂ ಸೇನೆ ಇದನ್ನು ಮೂಕ ಪ್ರೇಕ್ಷಕರಂತೆ ನಿಂತು ನೋಡುತ್ತಿದ್ದಾರೆ. ಅಲ್ಲದೆ ಸುರಕ್ಷತೆ ಹೆಸರಿನಲ್ಲಿ ನಮ್ಮನ್ನು ಮನೆಯಿಂದಲೂ ಹೊರಬರಲು ಬಿಡುತ್ತಿಲ್ಲ” ಎಂದು ಸ್ಥಳೀಯ ಮುಸ್ಲಿಮರು ಆರೋಪಿಸಿದ್ದಾರೆ.

 

 

 

 

 

 

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]