Thursday, December 12 , 2019
ಸಂವಿಧಾನ ಶಿಲ್ಪಿಗೆ ಅವಮಾನ | ಬೆಂಕಿ ಆರುವ ಮುನ್ನವೇ ಮತ್ತೊಂದು ಪ್ರಕರಣ!

ಮಂಡ್ಯ(21.11.2019): ಶಿಕ್ಷಣ ಇಲಾಖೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹತ್ತಿಕೊಂಡಿದ್ದ ಬೆಂಕಿ ಇನ್ನೂ ಆರುವ ಮುನ್ನವೇ ಮತ್ತೊಂದು ಘಟನೆಯೊಂದು ನಡೆದಿದ್ದು, ಶಾಸಕರೊಬ್ಬರ ಕಚೇರಿ ನವೀಕರಣ ಕೆಲಸ ನಡೆಯುತ್ತಿದ್ದು, ಈ ವೇಳೆ ಅಂಬೇಡ್ಕರ್ ಅವರ ಪೋಟೋವನ್ನು ಕಸದ ರಾಶಿಯಲ್ಲಿ ಎಸೆದಿರುವ ಪ್ರಸಂಗ ನಡೆದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹೀಗೊಂದು ಫೋಟೋ ಹರಿದಾಡುತ್ತಿದ್ದು, ಮೇಲುಕೋಟೆ ಶಾಸಕರ ಪಾಂಡವಪುರದಲ್ಲಿರುವ ಶಾಸಕರ ಕಚೇರಿ ನವೀಕರಣ ಕಾಮಗಾರಿಯ ಸಂದರ್ಭ ಅಂಬೇಡ್ಕರ್ ಅವರ ಫೋಟೋವನ್ನು ಕಸದ ರಾಶಿಯಲ್ಲಿ ಎಸೆಯಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಉಪ ವಿಭಾಗಾಧಿಕಾರಿ ಕಚೇರಿಯ ಕಟ್ಟಡದಲ್ಲಿ ಶಾಸಕರ ಕಚೇರಿ ಇದೆ ಎಂಧು ಹೇಳಲಾಗುತ್ತಿದೆ.  ಈ ಘಟನೆಗೆ ಸಂಬಂಧಿಸಿದಂತೆ ಶಾಸಕರು ಹಾಗೂ ಅಧಿಕಾರಿಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವ ಚಿತ್ರವನ್ನು ಕಸದ ರಾಶಿಗೆ ಎಸೆದು ಅವಮಾನ ಮಾಡಲಾಗಿದೆ. ಇದನ್ನು ಇಲ್ಲಿಯವರೆಗೂ ಯಾವ ಅಧಿಕಾರಿಗಳೂ ಗಮನಿಸದೇ ಇರುವುದು ಶೋಚನೀಯ ಎಂದು ಸಾಮಾಜಿ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]