Saturday, June 15 , 2019
ಸಮ್ಮಿಶ್ರ ಸರಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತೇ? | ಲೋಕ ಸೋಲಿನ ಬಳಿಕ ಶಾಸಕರ ಅಸಮಾಧಾನ ಶಮನಕ್ಕೆ ಕೈ ಪಡೆ ಒಲವು

ಬೆಂಗಳೂರು(25.05.2019): ಕಾಂಗ್ರೆಸ್- ಜೆಡಿಎಸ್ ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬಳಿಕ ಇದೀಗ ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರವನ್ನು ಉಳಿಸಿಕೊಳ್ಳಲು ತೀವ್ರ ಪರದಾಟ ನಡೆಸಿದೆ. ಸದ್ಯ ಸಮ್ಮಿಶ್ರ ಸರಕಾರವನ್ನು ಉಳಿಸಿಕೊಳ್ಳಲು ಸಚಿವ ಸಂಪುಟ ವಿಸ್ತರಣೆಗೆ ಎರಡೂ ಪಕ್ಷಗಳೂ ಸಿದ್ಧತೆ ನಡೆಸುತ್ತಿವೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ.

ಕೇಂದ್ರದಲ್ಲಿ ಬಿಜೆಪಿ ಮತ್ತೆ ಸರಕಾರ ರಚಿಸಲು ಮುಂದಾಗಿರುವಂತೆಯೇ ರಾಜ್ಯದಲ್ಲಿ ಅತೃಪ್ತ ಶಾಸಕರನ್ನು ಸೆಳೆಯಲು ರಾಜ್ಯ ಬಿಜೆಪಿ ಸಿದ್ಧತೆ ನಡೆಸಿದೆ. ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಹಲವು ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ಬೆದರಿಕೆಗಳು ಸಮ್ಮಿಶ್ರ ಸರಕಾರಕ್ಕೆ ಮೇಲಿಂದ ಮೇಲೆ ಬರುತ್ತಲೇ ಇದೆ. ಇಂತಹ ಸನ್ನಿವೇಶದಲ್ಲಿ ರಾಜ್ಯ ಸಮ್ಮಿಶ್ರ ಸರಕಾರವನ್ನು ಹೇಗಾದರೂ ಉಳಿಸಿಕೊಳ್ಳಿ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ. ಈ ಕಾರಣಕ್ಕಾಗಿ ಅತೃಪ್ತರನ್ನು ಕಾಂಗ್ರೆಸ್ ಸಮಾಧಾನಪಡಿಸಲು ಸಚಿವ ಸ್ಥಾನ ನೀಡಲು ಮುಂದಾಗಿದೆ ಎಂದು ವರದಿಯಾಗಿದೆ.

ಲೋಕಸಭಾ ಚುನಾವಣೆಯ ವೇಳೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾಗಿದ್ದರೂ, ಜೊತೆಗಿದ್ದೇ ಪರಸ್ಪರರ ವಿರುದ್ಧ ಈ ಎರಡೂ ಪಕ್ಷಗಳ ನಡುವೆ ಷಡ್ಯಂತ್ರಗಳು ನಡೆಸಿರುವುದು ರಹಸ್ಯವಾಗಿಯೇನೂ ಉಳಿದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸೋಲಿಗೆ ಈ ಎರಡೂ ಪಕ್ಷಗಳೇ ಕಾರಣವಾಗಿದೆ ಎನ್ನುವ ಮಾತುಗಳೂ ಕೇಳಿ ಬಂದಿವೆ. ಈ ನಡುವೆ ಕೆಟ್ಟ ಮೇಲೆ ಬುದ್ಧಿ ಬಂತು ಎನ್ನುವಂತೆ ಈಗ ಒಗ್ಗಟ್ಟಿನ ಮಂತ್ರ ಜಪಿಸಲು ಕಾಂಗ್ರೆಸ್ ನಾಯಕರು ತಮ್ಮ ಶಾಸಕರ ಮನವೊಲಿಸಲು ಮುಂದಾಗಿದೆ. ಕುಮಾರಸ್ವಾಮಿ ಅವರ ಮೌನಾಚರಣೆ ಮುಂದುವರಿದಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...