Tuesday, July 14 , 2020
ಕಥುವಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆಯಾದ ಬೆನ್ನಲ್ಲೇ ಮತ್ತೊಂದು ಅಮಾನವೀಯ ಘಟನೆ | 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ

ನಾಗಪುರ(11.06.2019): ಕಥುವಾದಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿಗಳಿಗೆ ಜೀವವಾಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದ 24 ಗಂಟೆಯೊಳಗೆ ಮತ್ತೊಂದು ಇಂತಹದ್ದೇ ಘಟನೆ ನಡೆದಿದ್ದು, ನಾಲ್ಕು ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿದ ಅಮಾನವೀಯ ಘಟನೆ ವರದಿಯಾಗಿದೆ.

ಭೂಷಣ್ ದುಹಾತ್(25) ಅತ್ಯಾಚಾರ ಎಸಗಿದ ಆರೋಪಿ ಎಂದು ತಿಳಿದು ಬಂದಿದೆ. ನಾಗಪುರ ಜಿಲ್ಲೆಯ ವಾಡಿಯಲ್ಲಿ ಈ ಘಟನೆ ನಡೆದಿದ್ದು, ಇನ್ನೂ ಪ್ರಪಂಚ ಜ್ಞಾನವೇ ಬೆಳೆಯದ ಬಾಲಕಿಯ ಮೇಲೆ ಆರೋಪಿ ತನ್ನ ಕ್ರೌರ್ಯ ಮೆರೆದಿದ್ದಾನೆ.

ಬಾಲಕಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿದ ಬಳಿಕ ಆರೋಪಿ ಬಾಲಕಿಯನ್ನು ಅತ್ಯಾಚಾರ ಎಸಗಿದ್ದು, ಈತನ ವಿರುದ್ಧ ಐಪಿಸಿ ಸೆಕ್ಷನ್ 376ರರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಇನ್ಸ್ ಪೆಕ್ಟರ್‍ ಆರ್‍.ಎಲ್.ಪಾಠಕ್ ತಿಳಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]