Tuesday, January 28 , 2020
BREAKING NEWS ಚಿಕ್ಕಮಗಳೂರು; ದತ್ತ ಜಯಂತಿ ಕಾರ್ಯಕ್ರಮದಿಂದ ವಾಪಾಸ್ಸಾಗುವಾಗ ಮಸೀದಿಗೆ ಕಲ್ಲೆಸೆದ ಕಿಡಿಗೇಡಿಗಳು

ಚಿಕ್ಕಮಗಳೂರು(12-12 -2019): ದತ್ತ ಜಯಂತಿ ಕಾರ್ಯಕ್ರಮಕ್ಕೆ ಬಾಬಾ ಬುಡನ್‍ಗಿರಿಗೆ ಆಗಮಿಸಿದ್ದ ಮಾಲಾಧಾರಿ ವೇಷದಲ್ಲಿದ್ದ ಕೆಲ ಕಿಡಿಗೇಡಿಗಳು ಕಾರ್ಯಕ್ರಮ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ಮಸೀದಿಗೆ ಕಲ್ಲೆಸೆದಿರುವ ಘಟನೆ ನಡೆದಿದೆ.

ಮೂಡಿಗೆರೆ ತಾಲೂಕಿನ ಭೂತನಕಾಡು ಮತ್ತು ಗುಲ್ಲನ್‍ಪೇಟೆ ಗ್ರಾಮದ ಎರಡು ಮಸೀದಿಗಳಿಗೆ ಕಿಡಿಗೇಡಿಗಳು ಕಲ್ಲೆಸೆದಿದ್ದಾರೆ. ಗುಲ್ಲನ್ ಪೇಟೆ ಗ್ರಾಮದಲ್ಲಿನ ಮನೆಯೊಂದರ ಮುಂದೆ ನಿಲ್ಲಿಸಿದ್ದ ಕಾರಿಗೆ ಕಲ್ಲೆಸೆದು ಕಾರಿನ ಗಾಜನ್ನು ಪುಡಿ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ದತ್ತಮಾಲೆ ಧರಿಸಿದ್ದ ಕಿಡಿಗೇಡಿ ಯುವಕರ ಗುಂಪು ಪಿಕಪ್ ವಾಹನವೊಂದಲ್ಲಿ ರಸ್ತೆಯುದ್ದಕ್ಕೂ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ, ದೇಶವಿರೋಧಿ ಘೋಷಣೆಗಳನ್ನು ಕೂಗುತ್ತಾ ತೆರಳಿದ್ದಾರೆ.

ತಕ್ಷಣ ಎಚ್ಚೆತ್ತ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದು. ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]