Wednesday, October 23 , 2019
BreakingNews ಕರ್ನಾಟಕ ವಿಧಾನಸಭಾ ಉಪಚುನಾವಣೆ ದಿನಾಂಕ ಪ್ರಕಟ | ಇಂದಿನಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ(21.09.2019): ಕಾಂಗ್ರೆಸ್ –ಜೆಡಿಎಸ್ ಶಾಸಕರ ರಾಜೀನಾಮೆಯಿಂದ ತೆರವಾಗಿರುವ  ರಾಜ್ಯದ 17 ವಿಧಾನಸಭಾ ಕ್ಷೇತ್ರಗಳಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಪ್ರಕಟವಾಗಿದೆ.

ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನಸಭಾ ಉಪಚುನಾವಣೆಯ ದಿನಾಂಕ ಘೋಷಿಸಿದ್ದು, ಅಕ್ಟೋಬರ್ 21ಕ್ಕೆ ಹದಿನೈದು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಅಕ್ಟೋಬರ್ 24ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದೆ.

ರಾಣೆಬೆನ್ನೂರು ಹಾಗೂ ವಿಜಯನಗರ ಕ್ಷೇತ್ರಗಳ ಚುನಾವಣೆಗೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ಇರುವ ಕಾರಣ ಈ ಕ್ಷೇತ್ರಗಳಲ್ಲಿ ಉಪಚುನಾವಣೆ ಇರುವುದಿಲ್ಲ. ಸೆಪ್ಟಂಬರ್ 23ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಸೆಪ್ಟಂಬರ್ 30 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]