Tuesday, July 14 , 2020
ಗುಂಡ್ಲುಪೇಟೆ; ದಲಿತ ಯುವಕನ ಥಳಿಸಿ ಬೆತ್ತಲೆ ಮೆರವಣಿಗೆ | ಬಿಎಸ್ ಪಿ ರಾಜ್ಯಾಧ್ಯಕ್ಷ ಹರಿರಾಮ್ ಖಂಡನೆ

ಬೆಂಗಳೂರು(11.06.2019): ಗುಂಡ್ಲುಪೇಟೆಯಲ್ಲಿ ದೇವಸ್ಥಾನ ಅಪವಿತ್ರಗೊಳಿಸಿದನೆಂದು ಆರೋಪಿಸಿ ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಪ್ರಕರಣವನ್ನು ಬಿಎಸ್ ಪಿ ರಾಜ್ಯಾಧ್ಯಕ್ಷ ಹರಿರಾಮ್ ತೀವ್ರವಾಗಿ ಖಂಡಿಸಿದ್ದು, ಇದೊಂದು ಅಮಾನವೀಯ ಘಟನೆಯಾಗಿದ್ದು, ಇನ್ನೊಬ್ಬರನ್ನು ಪ್ರೀತಿಸುವ ಗುಣವಿಲ್ಲದ ದೇಶ ಎತ್ತ ಸಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇಂದು ಇಡೀ ಜಗತ್ತೇ ಅಭಿವೃದ್ಧಿಯ ಕಡೆಗೆ ಹೋಗುತ್ತಿದೆ. ಆದರೆ ನಮ್ಮ ದೇಶದಲ್ಲಿ ಮನುಷ್ಯನನ್ನು ಮನುಷ್ಯರೇ ಪ್ರೀತಿಸುವ ಗುಣ ತೋರದೇ ಜಾತಿ ಧರ್ಮದ ಹೆಸರಿನಲ್ಲಿ ಅಮಾನವೀಯ ಘಟನೆಗಳು ನಡೆಯುತ್ತಿವೆ. ಇಂತಹ ಘಟನೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರಕಾರ ಮುಂದಾಗಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸರಕಾರಗಳೇ ಪ್ರಯತ್ನಿಸಬೇಕು ಎಂದು ಅವರು ಹೇಳಿದರು.

ಎಲ್ಲ ದೇಶಗಳು ದಿನದಿಂದ ದಿನಕ್ಕೆ ಮನುಷ್ಯತ್ವದ ಕಡೆಗೆ ಹೋಗುತ್ತಿದ್ದರೆ, ನಮ್ಮ ದೇಶದಲ್ಲಿ ಮನುಷ್ಯರು ದಿನದಿಂದ ದಿನಕ್ಕೆ ಪ್ರಾಣಿಗಳಾಗುತ್ತಾ ಹೋಗುತ್ತಿರುವುದು ಕಂಡು ಬರುತ್ತಿದೆ. ತನ್ನ ಸಹ ಮಾನವನನ್ನು ಕೀಳು ಎಂದು ಹೇಳುವುದು, ಹಗ್ಗದಲ್ಲಿ ಕಟ್ಟಿ, ಹೊಡೆದು ರಸ್ತೆಯಲ್ಲಿ ಬೆತ್ತಲೆ ಮೆರವಣಿಗೆ ನಡೆಸುವುದು ಇವೆಲ್ಲ ಮನುಷ್ಯರಾದವರು ಮಾಡುವಂತಹ ಕೆಲಸವಲ್ಲ ಎಂದು ಹರಿರಾಮ್ ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]