Sunday, May 31 , 2020
ಜಾತಿ ಭಯೋತ್ಪಾದನೆ ವಿರುದ್ಧ ಸಮರ ಸಾರಿದ ಬಿಎಸ್ ಪಿ | ದಲಿತರ ಬಗ್ಗೆ ತಲೆ ಕೆಡಿಸಿಕೊಳ್ಳದ ರಾಜ್ಯ ಕಾಂಗ್ರೆಸ್-ಬಿಜೆಪಿ

ಬೆಂಗಳೂರು(13.06.2019): ಮೈಸೂರಿನ ಗುಂಡ್ಲುಪೇಟೆಯಲ್ಲಿ ದಲಿತ ಯುವಕನನ್ನು ಬೆತ್ತಲೆ ಮೆರವಣಿಗೆ ಮಾಡಿರುವ ಪ್ರಕರಣವು ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ಈ ಘಟನೆ ಸೇರಿದಂತೆ ದೇಶಾದ್ಯಂತ ಜಾತಿ ವಿಚಾರಕ್ಕೆ ನಡೆಯುತ್ತಿರುವ ಹಲ್ಲೆಗಳನ್ನು ‘ಜಾತಿ ಭಯೋತ್ಪಾದನೆ’ ಎಂದು ಪರಿಗಣಿಸಿ ಇದರ ವಿರುದ್ಧ ಬಿಎಸ್ ಪಿ ಹೋರಾಟಕ್ಕಿಳಿದಿದೆ.

ಗುಂಡ್ಲುಪೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಸವರಾಜು(38), ಮಾಣಿಕ್ಯ(38), ಸತೀಶ್(31), ಚೆನ್ನಕೇಶವಮೂರ್ತಿ(32), ಪುಟ್ಟಸ್ವಾಮಿ(40) ಬಂಧಿತ ಆರೋಪಿಗಳಾಗಿದ್ದಾರೆ. ಘಟನೆಗೆ ಪ್ರೇರೇಪಣೆ ನೀಡಿದ ಅರ್ಚಕ ಶಿವಪ್ಪನನ್ನು ಈ ಪ್ರಕರಣದಿಂದ ಹೊರಗಿಡಲಾಗಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ.

ಘಟನೆ ಬೆಳಕಿಗೆ ಬಂದ ದಿನದಿಂದಲೇ ಸಂತ್ರಸ್ತನಿಗೆ ನ್ಯಾಯ ಕೊಡಿಸಲು ಬಿಎಸ್ ಪಿ ಮುಂದಾಗಿತ್ತು. ಬಿಎಸ್ ಪಿ ಮುಖಂಡ ಡಾ.ಶಿವಕುಮಾರ್‍ ಅವರು ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸಂತ್ರಸ್ತ ದಾಖಲಾಗಿದ್ದ ಆಸ್ಪತ್ರೆಗೆ ಧಾವಿಸಿ ಮಾಹಿತಿ ಪಡೆದುಕೊಂಡಿದ್ದರು. ಬಳಿಕ ಘಟನೆಯಿಂದ ಭೀತಿಯಲ್ಲಿದ್ದ ಸಂತ್ರಸ್ತನ ಕುಟುಂಬಸ್ಥರಿಗೆ ಬಿಎಸ್ ಪಿ ನೇತೃತ್ವದಲ್ಲಿ ಧೈರ್ಯ ತುಂಬಿ ಪೊಲೀಸರಿಗೆ ದೂರು ನೀಡಲಾಗಿತ್ತು. ಇದೀಗ ಜಾತಿ ಭಯೋತ್ಪಾದನೆಯ ವಿರುದ್ಧ ಸಮರ ಸಾರಲು ಬಿಎಸ್ ಪಿ ಮುಂದಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಇದರ ವಿರುದ್ಧ ಬಿಎಸ್ ಪಿ ಪ್ರತಿಭಟನೆಗೆ ಮುಂದಾಗಿದೆ ಎಂದು ತಿಳಿದು ಬಂದಿದೆ.

ಗುಂಡ್ಲುಪೇಟೆಯಲ್ಲಿ ಜಾತಿ ಭಯೋತ್ಪದನಾ ಕೃತ್ಯ ಬೆಳಕಿಗೆ ಬರುತ್ತಿದ್ದಂತೆಯೇ ಮಾಜಿ ಶಿಕ್ಷಣ ಸಚಿವ, ಕೊಳ್ಳೇಗಾಲದ ಹಾಲಿ ಶಾಸಕ ಎನ್.ಮಹೇಶ್ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದರು. ಇಂತಹ ಕೃತ್ಯಗಳನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕು. ಇದು ಬೆಳೆದರೆ ಮುಂದೆ ಬಿಹಾರ ರಾಜ್ಯಗಳಲ್ಲಿ ಆಗಾಗ ಬೆತ್ತಲೆ ಮೆರವಣಿಗೆ, ಗುಂಪು ಹಲ್ಲೆಗಳಂತಹ ಘಟನೆಗಳು ನಡೆಯುತ್ತಿರುವಂತೆ ಕರ್ನಾಟಕದಲ್ಲೂ ನಡೆಯ ಬಹುದು ಎಂದು ಆತಂಕ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸಿಎಂ ಕುಮಾರಸ್ವಾಮಿ ಅವರ ಗಮನಕ್ಕೂ ತಂದು ಪರಿಸ್ಥಿತಿಯನ್ನು ಮನವರಿಕೆ ಮಾಡಿದ್ದರು. ಬಳಿಕ ಸಂಬಂಧಪಟ್ಟ ಇಲಾಖೆಗಳ ಜೊತೆಗೆ ಮಾತನಾಡಿದ ಸಂತ್ರಸ್ತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದರು.

ಇನ್ನೂ ಬಿಎಸ್ ಪಿ ರಾಜ್ಯಾಧ್ಯಕ್ಷ ಹರಿರಾಮ್ ಅವರೂ, ಘಟನೆಯನ್ನು ತೀವ್ರವಾಗಿ ಖಂಡಿಸಿದ್ದರು. ಬೇರೆ ದೇಶಗಳು ಅಭಿವೃದ್ಧಿಯತ್ತ ಹೋಗುತ್ತಿದ್ದರೆ, ನಮ್ಮ ದೇಶ ಜಾತಿ, ಗುಂಪು ಹಲ್ಲೆಯಲ್ಲೇ ಮುಳುಗಿ ಅಭಿವೃದ್ಧಿಯಲ್ಲಿ ಹಿಂದೆ ಬೀಳುತ್ತಿದೆ ಜೊತೆಗೆ ದೇಶದ ದಲಿತರು ಎಲ್ಲರಂತೆ ಸಮಾನತೆಯಿಂದ ಬದುಕಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು.

ಬಿಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಅವರೂ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ದಲಿತ ಯುವಕನನ್ನು ಬೆತ್ತಲು ಮಾಡಿ, ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮವನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. ಪ್ರಕರಣದಲ್ಲಿ ನಿರ್ಲಕ್ಷ್ಯವಹಿಸಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಸಂತ್ರಸ್ತನಿಗೆ ಸೂಕ್ತ ರಕ್ಷಣೆ ಹಾಗೂ ಪರಿಹಾರ ನೀಡಬೇಕು ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

ಮೌನವಹಿಸಿದ ಸಂಸದ ಶ್ರೀನಿವಾಸ್ ಪ್ರಸಾದ್

ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಆದರೆ ಘಟನೆ ನಡೆದು ಇಷ್ಟು ದಿನವಾದರೂ ಶ್ರೀನಿವಾಸ್ ಪ್ರಸಾದ್ ಅವರು ಮೌನವಹಿಸಿದ್ದಾರೆ. ಬಿಜೆಪಿ ಪಕ್ಷದಲ್ಲಿದ್ದಾರೆ ಎನ್ನುವ ಕಾರಣಕ್ಕೆ ಅವರು ಈ ಘಟನೆಯ ಬಗ್ಗೆ ಮಾತನಾಡುತ್ತಿಲ್ಲವೇ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ಪ್ರಶ್ನಿಸುತ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ದಲಿತ ಮತಗಳಿಂದಲೇ ವಿಜಯಶಾಲಿಯಾಗಿದ್ದ ಶ್ರೀನಿವಾಸ್ ಪ್ರಸಾದ್ ಅವರು ಒಬ್ಬ ದಲಿತನನ್ನು ಸಾರ್ವಜನಿಕವಾಗಿ ಥಳಿಸಿ, ಬೆತ್ತಲೆ ಮೆರವಣಿಗೆ ನಡೆಸಿದರೂ ಅದರ ಬಗ್ಗೆ ಮಾತನಾಡಿಲ್ಲ ಎನ್ನುವ ಆಕ್ರೋಶಗಳು ಕೇಳಿ ಬಂದಿವೆ.

ತಲೆಕೆಡಿಸಿಕೊಳ್ಳದ ಕಾಂಗ್ರೆಸ್

ನಾವು ದಲಿತರ ಪರ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಗುಂಡ್ಲುಪೇಟೆ ಅಮಾನವೀಯ ಘಟನೆಯ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎನ್ನುವ ಮಾತುಗಳು ಕೇಳಿ ಬಂದಿವೆ. ಕಳೆದ ಬಾರಿ ಕಲಬುರ್ಗಿಯಲ್ಲೂ ದಲಿತರ ಮೇಲೆ ಹಲ್ಲೆ ನಡೆದಾಗ ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿರಲಿಲ್ಲ. ಇದೀಗ ಗುಂಡ್ಲುಪೇಟೆಯಲ್ಲಿ ಇಡೀ ದೇಶವೇ ತಲೆ ತಗ್ಗಿಸುವ ಘಟನೆ ನಡೆದರೂ ಕಾಂಗ್ರೆಸ್ ಗೆ ಇದೊಂದು ಸಾಮಾಜಿಕ ಪಿಡುಗು ಎಂದು ಕಾಣದಿರುವುದು ವಿಪರ್ಯಾಸ ಎಂದು ಜನ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]