Friday, August 23 , 2019
ಸರಕಾರಿ ಆಂಗ್ಲ ಮಾಧ್ಯಮ ಶಾಲೆ | ತಮ್ಮ ಕನಸಿನ ಯೋಜನೆಗೆ ಚಾಲನೆ ನೀಡಿದ ಎನ್.ಮಹೇಶ್

ಕೊಳ್ಳೇಗಾಲ(13.06.2019): ತಮ್ಮ ಕನಸಿನ ಯೋಜನೆಯಾದ ಸರಕಾರಿ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭಕ್ಕೆ ಮಾಜಿ ಶಿಕ್ಷಣ ಸಚಿವ, ಕೊಳ್ಳೇಗಾಲದ ಹಾಲಿ ಶಾಸಕ ಎನ್.ಮಹೇಶ್ ಅವರು ಟೇಪ್ ಕತ್ತರಿಸುವ ಮೂಲಕ ಚಾಲನೆ ನೀಡಿದರು.

ಕೊಳ್ಳೇಗಾಲ ತಾಲೂಕಿನ ಮುಡಿಗುಂಡ ಗ್ರಾಮದಲ್ಲಿ ಆರಂಭವಾದ ಆಂಗ್ಲ ಮಾಧ್ಯಮ ಸರಕಾರಿ ಶಾಲೆಗೆ ಚಾಲನೆ ನೀಡಿದ ಅವರು, ಈ ಯೋಜನೆಯಿಂದ ಬಡ ವಿದ್ಯಾರ್ಥಿಗಳಿಗೆ ಆಗುವ ಲಾಭ ಮತ್ತು ಸರಕಾರ ಶಾಲಾ ವಿದ್ಯಾರ್ಥಿಗಳು ಹೇಗೆ ಖಾಸಗಿ ಶಾಲಾ ಮಕ್ಕಳ ಸಾಮರ್ಥ್ಯಕ್ಕೆ ಸ್ಪರ್ಧೆಯನ್ನು ಒಡ್ಡಬಹುದು ಎಂದು ಮಾಹಿತಿ ನೀಡಿದರು. ಈ ಸಂದರ್ಭ ಅಧಿಕಾರಿಗಳು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಜೊತೆಗಿದ್ದರು.

ಎನ್.ಮಹೇಶ್ ಅವರು ಶಿಕ್ಷಣ ಸಚಿವರಾಗಿದ್ದ ಸಂದರ್ಭದಲ್ಲಿ ಸರಕಾರ ಶಾಲಾ ಮಕ್ಕಳಿಗೆ ದೊರೆಯುತ್ತಿರುವ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಸಲಹೆಗಳನ್ನು ಸರಕಾರದ ಮುಂದಿಟ್ಟಿದ್ದರು. ಆ ಸಲಹೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣವೂ ಒಂದಾಗಿತ್ತು. ಈ ಬಗ್ಗೆ ಹಲವು ಬಾರಿ ಸಿಎಂ ಕುಮಾರಸ್ವಾಮಿ ಅವರ ಜೊತೆಗೆ ಎನ್.ಮಹೇಶ್ ಚರ್ಚಿಸಿದ್ದರು. ಇದೀಗ ಸಚಿವರ ಶ್ರಮಕ್ಕೆ ಫಲ ದೊರೆತಿದ್ದು, ಗ್ರಾಮೀಣ ಭಾಗದ ಮಕ್ಕಳು ಆಂಗ್ಲ ಶಿಕ್ಷಣದ ಫಲಾನುಭವಿಗಳಾಗುತ್ತಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]