Friday, August 23 , 2019
ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ | ಇಬ್ಬರು ಆರೋಪಿಗಳ ಬಂಧನ | ಕಟ್ಟು ಕಥೆಗಳನ್ನು ಕಟ್ಟಿದ ಆರೋಪಿಗಳು

ಗುಂಡ್ಲುಪೇಟೆ(12.06.2019): ದಲಿತ ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಒಟ್ಟು ಆರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಕಬ್ಬೆಕಟ್ಟೆ ಶನೇಶ್ವರ ದೇವಸ್ಥಾನದ ಅರ್ಚಕ ಶಿವಪ್ಪ ಹಾಗೂ ಪುಟ್ಟಸ್ವಾಮಿಯನ್ನು ಪೊಲೀಸರು ಬಂಧಿಸಿದ್ದು, ಬಸವರಾಜು, ಮಾಣಿಕ್ಯ, ಸತೀಶ್, ಮೂರ್ತಿ ತಲೆಮರೆಸಿಕೊಂಡಿದ್ದಾರೆ. ಪ್ರತಾಪ್ ಅವರ ಚಿಕ್ಕಪ್ಪನ ಮಗ ಕಾಂತರಾಜು ಎಂಬವರು ನೀಡಿರುವ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿಗಳ ವಿರುದ್ಧ ಎಫ್ ಐ ಆರ್‍ ದಾಖಲಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

ಭಯ ಭೀತರಾದ ಸಂತ್ರಸ್ತನ ತಂದೆ

ಮಗನನ್ನು ಸಾರ್ವಜನಿಕವಾಗಿ ಬೆತ್ತಲೆ ಮೆರವಣಿಗೆ ನಡೆಸಿರುವ ದೃಶ್ಯವನ್ನು ಕಣ್ಣಾರೆ ಕಂಡು ಅದನ್ನು ತಡೆಯಲು ಹೋದ ಸಂದರ್ಭ ಅವರನ್ನೂ ಕಟ್ಟಿ ಹಾಕಿ ಹೊಡೆಯಲು ಆರೋಪಿಗಳು ಯತ್ನಿಸಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ಹೊಡೆಯುತ್ತಾ ಮೆರವಣಿಗೆ ನಡೆಸಿದರೂ ಸಂತ್ರಸ್ತ ಪ್ರತಾಪ್ ನನ್ನು ರಕ್ಷಿಸಲು ಗ್ರಾಮದ ಯಾರೂ ಮುಂದೆ ಬರಲಿಲ್ಲ. ಸ್ವತಃ ದಲಿತ ಸಮುದಾಯದವರೇ ನೋಡಿಯೂ ನೋಡದಂತಿದ್ದರು. ಈ ಎಲ್ಲ ಬೆಳವಣಿಗೆಗಳಿಂದ ಸಂತ್ರಸ್ತನ ತಂದೆ ತೀವ್ರ ನೊಂದಿದ್ದಾರೆ. ಹೀಗಾಗಿ ಈ ಸಮಸ್ಯೆಗಳೇ ಬೇಡ ಎಂದು ನಿರ್ಧರಿಸಿರುವ ಅವರು ತಮ್ಮ ಮಗ ಮಾನಸಿಕ ಅಸ್ವಸ್ಥನೆಂದು ವೈದ್ಯಕೀಯ ಪ್ರಮಾಣ ಪತ್ರವನ್ನು ಪೊಲೀಸರಿಗೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಯಾರು ನಿಜವಾದ ಮಾನಸಿಕ ಅಸ್ವಸ್ಥರು?

ಸಂತ್ರಸ್ತ ಪ್ರತಾಪ್ ದೇವಸ್ಥಾನದಲ್ಲಿರುವಾಗಲೇ ಬಟ್ಟೆ ಹಾಕದೇ ಕುಳಿತಿದ್ದ. ಆತನಿಗೆ ಬಟ್ಟೆ ನೀಡಲು ಹೋದರೆ ಗ್ರಾಮಸ್ಥನಿಗೆ ಹೊಡೆಯಲು ಬಂದಿದ್ದಾನೆ. ಆಗ ಕೈ ಕಟ್ಟಿ ಹಾಕಿದ್ದೇವೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ ಎಂದು ಆರೋಪಿಗಳು ಜೂನ್ 7ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಆರೋಪಿಗಳು ಸಂತ್ರಸ್ತನನ್ನು ಬೆತ್ತಲೆ ಮೆರವಣಿಗೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಜೊತೆಗೆ ಬೆತ್ತಲೆ ಮೆರವಣಿಗೆ ನಡೆದಿರುವುದನ್ನು ಬಹುತೇಕ ಗ್ರಾಮಸ್ಥರು ನೋಡಿದ್ದಾರೆ ಎನ್ನುತ್ತಾರೆ. ಆತ ಮಾನಸಿಕ ಅಸ್ವಸ್ಥನೇ ಆಗಿದ್ದರೆ, ಬೆತ್ತಲೆ ಮರವಣಿಗೆ ಮಾಡಬೇಕಾದ ಅನಿವಾರ್ಯತೆ ಏನಿತ್ತು? ಮತ್ತು ಬೆತ್ತಲೆ ಮೆರವಣಿಗೆ ನಡೆಸಿದ ಬಳಿಕ ನಾವು ಮೆರವಣಿಗೆ ನಡೆಸಿಯೇ ಇಲ್ಲ ಎಂದು ಆರೋಪಿಗಳು ಯಾಕೆ ಹೇಳಬೇಕಿತ್ತು? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ದೇವಸ್ಥಾನದ ಆವರಣದಲ್ಲಿ ಕುಳಿತಿದ್ದ ವ್ಯಕ್ತಿಯನ್ನು ಆತನ ಜಾತಿ ಕೇಳಿ ಹೊಡೆದು, ಕೈಗಳನ್ನು ಕಟ್ಟಿಹಾಕಿ, ತಲೆಗೆ ಕಲ್ಲಿನಿಂದ ಹೊಡೆದು ಬೆತ್ತಲೆ ಮೆರವಣಿಗೆ ನಡೆಸಿರುವವರು ನಿಜವಾದ ಮಾನಸಿಕ ಅಸ್ವಸ್ಥರೇ, ಇಲ್ಲ ದೌರ್ಜನ್ಯಕ್ಕೊಳಗಾದ ಪ್ರತಾಪ್ ಮಾನಸಿಕ ಅಸ್ವಸ್ಥನೇ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ಪ್ರಶ್ನಿಸುತ್ತಿದ್ದಾರೆ. ಜೊತೆಗೆ ಪ್ರತಾಪ್ ನ ಕುಟುಂಬವನ್ನು ಮೇಲ್ಜಾತಿಯವರು ಬೆದರಿಸಿ ಆತ ಮಾನಸಿಕ ಅಸ್ವಸ್ಥ ಎಂದು ವೈದ್ಯಕೀಯ ಪ್ರಮಾಣ ಪತ್ರವನ್ನು ಪೊಲೀಸರಿಗೆ ನೀಡುವಂತೆ ಮಾಡಲಾಗಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]