Sunday, May 31 , 2020
ಶಾಂತಿಯಲ್ಲಿ 141 ಸ್ಥಾನ ಪಡೆದುಕೊಂಡ ಭಾರತ | ಭಾರತದಲ್ಲಿ ಅಶಾಂತಿ ತಾಂಡವವಾಡುತ್ತಿದೆ ಎಂದ ವರದಿ

ನವದೆಹಲಿ(13.06.2019): ಪ್ರಪಂಚದ 163 ದೇಶಗಳಲ್ಲಿ ಶಾಂತಿಯುತ ದೇಶಗಳ ಪಟ್ಟಿಯಲ್ಲಿ ಭಾರತ ತೀರಾ ಕೆಳಮಟ್ಟದ ಸ್ಥಾನವನ್ನು ಪಡೆದುಕೊಂಡಿದ್ದು, ಜಗತ್ತಿನಲ್ಲೇ ಅತೀ ಹೆಚ್ಚು ಅಶಾಂತಿಯುತ ರಾಷ್ಟ್ರಗಳ ಸಾಲಿನಲ್ಲಿ ಭಾರತವೂ ಬಂದು ನಿಂತಿದೆ.

ಆಸ್ಟ್ರೇಲಿಯನ್ ಚಿಂತಕರ ಚಾವಡಿ ಸಂಸ್ಥೆ ಈ ಬಗ್ಗೆ ವರದಿಯೊಂದನ್ನು ಸಿದ್ಧಪಡಿಸಿದ್ದು, 163 ರಾಷ್ಟ್ರಗಳ ಶಾಂತಿ ಸೂಚ್ಯಂಕವನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಭಾರತ 141ನೇ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ಭಾರತದಲ್ಲಿ ಅಶಾಂತಿ ತಾಂಡವವಾಡುತ್ತಿದೆ ಎನ್ನುವುದು ಅಂತರಾಷ್ಟ್ರೀಯ ಮಟ್ಟದಲ್ಲಿ ಬಹಿರಂಗಗೊಂಡಿದೆ.

ಈ ವರದಿಯ ಪ್ರಕಾರ, ಭಾರತ ಫಿಲಿಪ್ಪನ್ಸ್, ಜಪಾನ್, ಬಾಂಗ್ಲಾದೇಶ, ಮ್ಯಾನ್ಮಾರ್‍, ಚೀನಾ, ಇಂಡೋನೇಷ್ಯಾ, ವಿಯೆಟ್ನಾಂ ಮತ್ತು ಪಾಕಿಸ್ತಾನ ಅತೀ ಹೆಚ್ಚು ಅಪಾಯಕಾರಿ ವಾತಾವರಣವನ್ನು ಕೂಡಿದೆ ಎಂದು ಹೇಳಲಾಗಿದೆ. ಇದರಲ್ಲಿ ಚೀನಾ, ಬಾಂಗ್ಲಾದೇಶ ಮತ್ತು ಭಾರತದ ಒಟ್ಟು 39.3 ಕೋಟಿ ಜನರು ಭಯ ಆತಂಕದ ವಾತಾವರಣದಲ್ಲಿ ಬದುಕುತ್ತಿದ್ದಾರೆ ಎಂದು ವರದಿಯು ತಿಳಿಸಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]