Friday, August 23 , 2019
ರಾಯಚೂರು: ಶಾಲಾ ಮಕ್ಕಳಿಗೆ ಎನ್.ಮಹೇಶ್ ಪುಸ್ತಕ, ಬ್ಯಾಗ್ ವಿತರಣೆ | ಗಿರೀಶ್ ಕಾರ್ನಾಡ್ ಅವರಿಗೆ ಶ್ರದ್ಧಾಂಜಲಿ ಅರ್ಪಣೆ

ರಾಯಚೂರು(12.06.2019): ಜಿಲ್ಲೆಯ ಕಾಡ್ಲೂರಿನಲ್ಲಿ ರಂಗ್ ದೇ ಸಮೂಹ ಆಯೋಜಿಸಿದ್ದ ಮಕ್ಕಳಿಗೆ ಪಠ್ಯ ಪುಸ್ತಕ, ಬ್ಯಾಗ್, ಗಣಕಯಂತ್ರ ಹಾಗೂ ಇನ್ನಿತರ ಉಪಕರಣಗಳ ವಿತರಣಾ ಕಾರ್ಯಕ್ರಮದಲ್ಲಿ ಮಾಜಿ ಶಿಕ್ಷಣ ಸಚಿವ, ಕೊಳ್ಳೇಗಾಲದ ಹಾಲಿ ಶಾಸಕ ಎನ್.ಮಹೇಶ್ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಗಿರೀಶ್ ಕಾರ್ನಾಡ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಬಳಿಕ ಶಾಲಾ ಮಕ್ಕಳಿಗೆ ಎನ್.ಮಹೇಶ್ ಪುಸ್ತಕ, ಬ್ಯಾಗ್ ವಿತರಣೆ ಮಾಡಿದರು. ಈ ಸಂದರ್ಭ ಶಾಲಾ ಶಿಕ್ಷಕ ವೃಂದ ಹಾಗೂ ಗಣ್ಯರು ಎನ್.ಮಹೇಶ್ ಅವರಿಗೆ ಜೊತೆಯಾದರು.

ರಾಯಚೂರು ಜಿಲ್ಲೆಯ ಕಾಡ್ಲೂರಿನ ಪುಟ್ಟಹಳ್ಳಿಯಲ್ಲಿರುವ ಶಾಲೆಯಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲು ಈ ಹಿಂದೆ ಶಿಕ್ಷಣ ಸಚಿವರಾಗಿದ್ದ ಎನ್.ಮಹೇಶ್ ಅವರನ್ನು ಆಹ್ವಾನಿಸಲಾಗಿತ್ತು. ಇವರ ಕರೆಗೆ ಸ್ಪಂದಿಸಿದ ಎನ್.ಮಹೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]