Friday, November 22 , 2019
ಬಿಜೆಪಿ ಅಧಿಕಾರ ಹಾಗೂ ಪೊಲೀಸರನ್ನು ದುರುಪಯೋಗ ಮಾಡಿಕೊಂಡಿದೆ | ಡಿ.ಕೆ.ಶಿವಕುಮಾರ್ ಆಕ್ರೋಶ

ಮುಂಬೈ(10.07.2019): ಮುಂಬೈಯಲ್ಲಿ ಕರ್ನಾಟಕ ಶಾಸಕರು ಅವಿತಿರುವ ರೆಸಾರ್ಟ್ ಮುಂಭಾಗದಲ್ಲಿ ಧರಣಿ ನಡೆಸುತ್ತಿದ್ದ ಸಚಿವ ಡಿ.ಕೆ.ಶಿವಕುಮಾರ್ ಅವರ ಜೊತೆಗೆ ಸಚಿವ ಜಿ.ಟಿ.ದೇವೇಗೌಡ, ಶಾಸಕರಾದ ಶಿವಲಿಂಗೇಗೌಡ, ಬಾಲಕೃಷ್ಣ ಅವರನ್ನೂ ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ವಶಕ್ಕೆ ಪಡೆದ ಬಳಿಕ ಮುಂಬೈ ಪೊಲೀಸರು ಇವರನ್ನು ಮುಂಬೈನ ಬಿಕೆಸಿ ಗೆಸ್ಟ್ ಹೌಸ್ ಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ತಮ್ಮನ್ನು ವಶಕ್ಕೆ ಪಡೆದ ಪೊಲೀಸರ ನಡೆಯನ್ನು ಖಂಡಿಸಿರುವ ಡಿ.ಕೆ.ಶಿವಕುಮಾರ್, ಬಿಜೆಪಿ ಪೊಲೀಸರನ್ನು ಹಾಗೂ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾವು ಶಾಸಕರನ್ನು ಭೇಟಿ ಮಾಡಲು ಕಾಯುತ್ತಿದ್ದೆವು. ಬಿಜೆಪಿಯವರು ನಮ್ಮ ಬುಕ್ಕಿಂಗ್ ರೂಮ್ ಗಳನ್ನೂ ಕ್ಯಾನ್ಸಲ್ ಮಾಡಿಸಿದ್ದಾರೆ. ಆದರೂ ನಾವು ಶಾಸಕರಿಗಾಗಿ  ಕಾಯುತ್ತಿದ್ದೆವು. ಇದ್ದಕ್ಕಿದ್ದಂತೆಯೇ ಪೊಲೀಸರು ನಮ್ಮನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಪೊಲೀಸರ ವಶದಲ್ಲಿರುವ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]