Tuesday, July 14 , 2020
ಕಥುವಾ: 8 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ | ಆರು ಮಂದಿ ದೋಷಿಗಳು | ಕೋರ್ಟ್ ತೀರ್ಪು

ಶ್ರೀನಗರ(10.06.2019): ಜಮ್ಮು-ಕಾಶ್ಮೀರದ ಕಥುವಾದಲ್ಲಿ ೮ ವರ್ಷದ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಆರೋಪಿಗಳ ಪೈಕಿ ಆರು ಮಂದಿಯನ್ನು ದೋಷಿಗಳು ಎಂದು ಪಠಾಣ್ ಕೋಟ್ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

2018ರ ಜನವರಿ 10ರಂದು ಈ ಅಮಾನವೀಯ ಘಟನೆ ನಡೆದಿತ್ತು. ತಂಡವೊಂದು ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಗೈದಿದ್ದರು. ಈ ಪ್ರಕರಣ ಇಡೀ ದೇಶದಲ್ಲೇ ಸಂಚಲನ ಮೂಡಿಸಿತ್ತು. ದೇಶಾದ್ಯಂತ ಭಾರೀ ಪ್ರತಿಭಟನೆಗಳೂ ನಡೆದಿದ್ದವು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಂಝೀಮ್, ದೀಪಕ್, ಖಜುರಿಯಾ, ತಿಲಕ್ ರಾಜ್, ಸುರೇಂದ್ರ, ಆನಂದ್ ದತ್ತಾ, ಪ್ರವೇಶ್ ಹಾಗೂ ವಿಶಾಲ್ ಎನ್ನುವ ಆರೋಪಿಗಳನ್ನು ಬಂಧಿಸಿತ್ತು. ಇದೀಗ ಆರೋಪಿ ವಿಶಾಲ್ ನನ್ನು ನ್ಯಾಯಾಲಯ ದೋಷ ಮುಕ್ತಗೊಳಿಸಿದೆ. ಉಳಿದ ಆರು ಮಂದಿಯನ್ನು ದೋಷಿಗಳು ಎಂದು ತೀರ್ಪು ನೀಡಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]