Friday, November 22 , 2019
ಕೊಳ್ಳೇಗಾಲದಲ್ಲಿ ಜನಸಂಪರ್ಕ ಸಭೆ; ಆಡಳಿತ ಯಂತ್ರವನ್ನು ಜನರ ಬಳಿಗೆ ತಂದ ಮಾದರಿ ಶಾಸಕ ಎನ್. ಮಹೇಶ್

ಕೊಳ್ಳೇಗಾಲ(04-07-2019): ಮಾಜಿ ಸಚಿವ, ಬಿಎಸ್ಪಿ ಶಾಸಕ ಎನ್.ಮಹೇಶ್ ತನ್ನ ಕ್ಷೇತ್ರದಾದ್ಯಂತ ಜನಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದು, ಇಂದು ಕೊಳ್ಳೇಗಾಲ ಕ್ಷೇತ್ರದ ಕೆಂಪನಪುರ ಮತ್ತು ಕುದೇರ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಬಹುತೇಕ ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ಎನ್ ಮಹೇಶ್,  ಪ್ರಜೆಗಳು ಮತ್ತು ಆಡಳಿತ ವರ್ಗ ಜೊತೆಯಾಗಿ ಕೆಲಸ ಮಾಡುವುದು ಜನಸಂಪರ್ಕ ಸಭೆಯ ಗುರಿ ಎಂದು ಹೇಳಿದ್ದು, ಈ ಮೂಲಕ ಮಧ್ಯವರ್ತಿಗಳ ಹಾವಳಿಯನ್ನು ತಡೆಯಲಾಗುವುದು ಮತ್ತು ಜನರ ಹಾಗೂ ಅಧಿಕಾರಿಗಳ ನಡುವಿನ ಬಾಂಧವ್ಯವನ್ನು ಉತ್ತಮಗೊಳಿಸಲಾಗುವುದು ಎಂದು ಹೇಳಿದ್ದಾರೆ. ಸಭೆಯಲ್ಲಿ ಜನರ ಸಮಸ್ಯೆಗಳಿಗೆ ಶೀಘ್ರವಾಗಿ ಪರಿಹಾರವನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಲು ಸರಕಾರಿ ಕಚೇರಿಗಳಿಗೆ ಅಲೆದಾಟ ನಡೆಸಿ ರೋಸಿ ಹೋಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯ, ದಬ್ಬಾಳಿಕೆಗಳಿಂದ ಅರ್ಹ ಫಲಾನುಭವಿಗಳು ವಂಚಿತರಾಗುತ್ತಿದ್ದಾರೆ. ಇಂತಹ ಘಟನೆಗಳು ನಡೆಯಬಾರದು ಎನ್ನುವ ದೃಷ್ಟಿಯಲ್ಲಿ ಕೊಳ್ಳೇಗಾಲದ ಜನಪ್ರಿಯ ಶಾಸಕ ಎನ್.ಮಹೇಶ್ ಅವರು ಆಡಳಿತ ಯಂತ್ರವನ್ನೇ ಜನರ ಬಳಿಗೆ ಕರೆ ತಂದು, ಅಧಿಕಾರಿಗಳನ್ನು ಜನರು ಪ್ರಶ್ನಿಸುವ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ.

ವಿವಿಧ ಇಲಾಖೆಯ ಅಧಿಕಾರಿಗಳು ಎನ್ ಮಹೇಶ್ ಅವರ ಜನಸಂಪರ್ಕ ಸಭೆಯಲ್ಲಿ ಉಪಸ್ಥಿತರಿದ್ದರು. ಗ್ರಾಮದ ಜನರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು. ಮೇ.21ಕ್ಕೆ ಜನಸಂಪರ್ಕ ಸಭೆ ಆರಂಭವಾಗಿದ್ದು, 22 ಜನಸಂಪರ್ಕ ಸಭೆಯನ್ನು ಶಾಸಕ ಎನ್ ಮಹೇಶ್ ಈಗಾಗಲೇ ನಡೆಸಿದ್ದಾರೆ. ಇನ್ನು 12 ಗ್ರಾಮ ಪಂಚಾಯತಿಗಳಲ್ಲಿ ಜನ ಸಂಪರ್ಕ ಸಭೆ ನಡೆಯಲಿದೆ.

 

 

 

 

 

 

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]