Tuesday, July 23 , 2019
BREAKING NEWS
ನ್ಯಾಯಬೆಲೆ ಅಂಗಡಿಗಳಲ್ಲಿ ಹೆಬ್ಬೆಟ್ಟು ಬೀಳದ ಕಾರಣಕ್ಕೆ ವಯಸ್ಕರಿಗೆ ಅಕ್ಕಿವಿತರಣೆಯಲ್ಲಿ ಅನ್ಯಾಯ ಮಾಡಬೇಡಿ-ಜನಸಂಪರ್ಕ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಎನ್. ಮಹೇಶ್

ಕೊಳ್ಳೇಗಾಲ(07-05-2019):  ಕೊಳ್ಳೇಗಾಲ ಕ್ಷೇತ್ರದ ಶಾಸಕ, ಮಾಜಿ ಸಚಿವ  ಎನ್ ಮಹೇಶ್ ಅವರು ತನ್ನ ಕ್ಷೇತ್ರದಾದ್ಯಂತ ಕೈಗೊಂಡ ಜನಸಂಪರ್ಕ ಸಭೆಯ ಅಂಗವಾಗಿ ಇಂದು ಕ್ಷೇತ್ರದ ಹೊನ್ನೂರು ಗ್ರಾಮ ಪಂಚಾಯಿತಿ ಮತ್ತು ಕೆಸ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜನಸಂಪರ್ಕ ಸಭೆ ನಡೆಯಿತು. ಸಭೆಯಲ್ಲಿ ಶಾಸಕರು, ಜನರ ಸಮಸ್ಯೆಗಳಿಗೆ ಪರಿಹಾರವನ್ನು ಸೂಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಕೆಲವು ಸಮಸ್ಯೆಗಳಿಗೆ ಸಭೆಯಲ್ಲೇ ಪರಿಹಾರ ಸೂಚಿಸಿ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಸಭೆಯಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಹೆಬ್ಬೆಟ್ಟು ಬೀಳದ ಕಾರಣಕ್ಕೆ ಬಿಪಿಎಲ್ ಕಾರ್ಡ್ ನಲ್ಲಿ ವಯಸ್ಕರಿಗೆ ಅಕ್ಕಿ ವಿತರಣೆಯಲ್ಲಿ ಅನ್ಯಾಯ ಮಾಡುತ್ತಿರುವ ಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ಶಾಸಕ ಎನ್ ಮಹೇಶ್, ಅಧಿಕಾರಿಗಳಿಗೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರವಾಗಿ ಪರಿಹಾರವನ್ನು ಸೂಚಿಸುವಂತೆ ಆದೇಶಿಸಿದ್ದಾರೆ. ನೀರಾವರಿ ಸಮಸ್ಯೆ, ವಸತಿ ವಿತರಣೆ, ಪಿಂಚಣಿ ಯೋಜನೆಯಲ್ಲಿನ  ವಿವಿಧ ಸಮಸ್ಯೆಗಳನ್ನು ಜನರು ಈ ವೇಳೆ ಶಾಸಕರ ಗಮನಕ್ಕೆ ತಂದಿದ್ದು, ಸಭೆಯಲ್ಲಿದ್ದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಎನ್ ಮಹೇಶ್ ಪರಿಹಾರ ಸೂಚಿಸುವಂತೆ ಆದೇಶಿಸಿದ್ದಾರೆ.

ಕೊಳ್ಳೇಗಾಲ ಕ್ಷೇತ್ರದಾದ್ಯಂತ ಈಗಾಗಲೇ 24 ಕಡೆ ಜನ ಸಂಪರ್ಕ ಸಭೆ ನಡೆದಿದೆ, ಇನ್ನು 10 ಕ್ಷೇತ್ರಗಳಲ್ಲಿ ಜನಸಂಪರ್ಕ ಸಭೆ ನಡೆಯಲಿದ್ದು, ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸುವ ಮೂಲಕ ಶಾಸಕ ಎನ್ ಮಹೇಶ್ ರಾಜ್ಯದಲ್ಲೇ ಮೊದಲ ಬಾರಿಗೆ ಆಡಳಿತ ಯಂತ್ರವನ್ನು ಜನರ ಬಳಿಗೆ ತೆಗೆದುಕೊಂಡು ಹೋಗಿ ಮಾದರಿಯಾಗಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...