Saturday, June 15 , 2019
ಪಕ್ಷೇತರ ಶಾಸಕರ ಪ್ರಮಾಣ ವಚನಕ್ಕೆ ಜೆಡಿಎಸ್-ಕಾಂಗ್ರೆಸ್ ಅಧ್ಯಕ್ಷರ ಗೈರು

ಬೆಂಗಳೂರು(14.06.2019): ಸಮ್ಮಿಶ್ರ ಸರಕಾರದ ಸಚಿವ ಸಂಪುಟಕ್ಕೆ ಪಕ್ಷೇತರ ಶಾಸಕರಾದ ಆರ್‍.ಶಂಕರ್‍ ಹಾಗೂ ನಾಗೇಶ್ ಇಂದು ಸೇರ್ಪಡೆಗೊಂಡಿದ್ದು, ಈ ಸಮಾರಂಭಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಹಾಗೂ ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ಗೈರಾಗುವ ಮೂಲಕ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದಾರೆ.

ಸಮ್ಮಿಶ್ರ ಸರಕಾರದಲ್ಲಿ ಎರಡೂ ಪಕ್ಷಗಳ ನಾಯಕರ ಮುನಿಸು ದಿನದಿಂದ ದಿನಕ್ಕೆ ತಾರಕಕ್ಕೆ ಏರುತ್ತಿದೆ. ಪಕ್ಷೇತರ ಶಾಸಕರಿಗೆ ಸಚಿವ ಸ್ಥಾನ ನೀಡಿರುವುದು ಬಹುತೇಕ ಶಾಸಕರಲ್ಲಿ ಅಸಮಾಧಾನವನ್ನುಂಟು ಮಾಡಿದೆ ಎಂದು ಹೇಳಲಾಗುತ್ತಿದೆ. ಜೊತೆಗೆ ಈ ಸಚಿವ ಸ್ಥಾನ ಹಂಚಿಕೆ ಬಗ್ಗೆ ಉಭಯ ಪಕ್ಷಗಳ ನಾಯಕರಿಗೆ ಸಮ್ಮತಿ ಇಲ್ಲವೇ ಎನ್ನುವ ಅನುಮಾನಗಳಿಗೆ ಕಾರಣವಾಗಿದೆ.

ಸಮಾರಂಭದಲ್ಲಿ ದಿನೇಶ್ ಗುಂಡೂರಾವ್, ಎಚ್.ವಿಶ್ವನಾಥ್ ಹಾಗೂ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರೂ ಕಾಣಿಸಿಕೊಳ್ಳಲಿಲ್ಲ. ಜೆಡಿಎಸ್ ಮತ್ತು ಕಾಂಗ್ರೆಸ್ ನೊಳಗೆ ಮುಸುಕಿನ ಗುದ್ದಾಟ ಮತ್ತೆ ಆರಂಭವಾಗಿದ್ದು, ರಾಜ್ಯ ಕಾಂಗ್ರೆಸ್ ಗೆ ಹೈಕಮಾಂಡ್ ಆದೇಶ ಕೈಯನ್ನು ಕಟ್ಟಿ ಹಾಕಿದಂತಾಗಿದೆ. ಇತ್ತ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ನ ದಿನಕ್ಕೊಂದು ವರ್ತನೆಯಿಂದ ಮಾನಸಿಕ ಹಿಂಸೆಯ ವಾತಾವರಣದಲ್ಲಿ ಕಾರ್ಯನಿರ್ವಹಿಸುವಂತಾಗಿದೆ ಎನ್ನುವ ಅಭಿಪ್ರಾಯಗಳು ಕೇಳಿ ಬಂದಿವೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...