Tuesday, October 22 , 2019
ಸಮಾಜ ಕಲ್ಯಾಣ ಇಲಾಖೆ ಕಾರ್ಯ ಪರಿಶೀಲನೆ ನಡೆಸಿದ ಸಿಎಂ ಕುಮಾರಸ್ವಾಮಿ | ಅಧಿಕಾರಿಗಳಿಗೆ ವಿವಿಧ ಸೂಚನೆ

ಬೆಂಗಳೂರು(13.06.2019): ಸಮಾಜ ಕಲ್ಯಾಣ ಇಲಾಖೆಯ ಕಾರ್ಯ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿ ವಿವಿಧ ಸೂಚನೆಗಳನ್ನು ನೀಡಿದರು.

ಜಿಲ್ಲಾಧಿಕಾರಿಗಳು, ಸಿಇಒಗಳು ಕಡ್ಡಾಯವಾಗಿ ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಆಹಾರದ ಗುಣಮಟ್ಟ, ಸ್ವಚ್ಛತೆ, ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯ ಹಾಗೂ ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಕೆಲವು ಹಾಸ್ಟೆಲ್ ಗಳಲ್ಲಿ ಅನಧಿಕೃತವಾಗಿ ಕೆಲವರು ಉಳಿದುಕೊಂಡಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಕುಮಾರಸ್ವಾಮಿ ಸೂಚನೆ ನೀಡಿದರು.

ಎಸ್.ಸಿ.ಎಸ್. ಪಿ. / ಟಿ ಎಸ್ ಪಿ ಯೋಜನೆಗಳಡಿ ಕಾರ್ಯಕ್ರಮಗಳನ್ನು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಬೇಕು ಎಂದು ಇದೇ ಸಂದರ್ಭದಲ್ಲಿ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ರಾಜ್ಯದ 55 ಲಕ್ಷ ವಿದ್ಯಾರ್ಥಿಗಳ ಪೈಕಿ ಈಗಾಗಲೆ 51 ಲಕ್ಷ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸೀಡಿಂಗ್ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಉಳಿದ 4 ಲಕ್ಷ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಈ ತಿಂಗಳ ಒಳಗೆ ಬ್ಯಾಂಕ್ ಖಾತೆಗಳ ಆಧಾರ್ ಜೋಡಣೆ ಮುಗಿಯುತ್ತದೆ ಎಂದು ಈ ವೇಳೆ ಸಿಎಂ ಕುಮಾರಸ್ವಾಮಿಯವರಿಗೆ ಅಧಿಕಾರಿಗಳು ಮಾಹಿತಿ ನೀಡಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]