Saturday, August 24 , 2019
‘ಶಾಲಾ ಸಂಪರ್ಕ ಸೇತು’ ಯೋಜನೆ- ವಿಡಿಯೋ ಸಂವಾದ

ಬೆಂಗಳೂರು(12.06.2019): ಲೋಕೋಪಯೋಗಿ ಇಲಾಖೆಯ ಸಮಗ್ರ ಅಭಿವೃದ್ಧಿಯ ಕುರಿತು ಇಂದು ಪ್ರಗತಿ ಪರಿಶೀಲನಾ ಸಭೆ ಜರುಗಿತು. ಈ ಸಂದರ್ಭದಲ್ಲಿ ‘ಶಾಲಾ ಸಂಪರ್ಕ ಸೇತು’ ಯೋಜನೆಯ ಅನುಷ್ಠಾನವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು, ನಿರ್ಮಾಣಗೊಂಡ ಸೇತುವೆಯ ಬಳಿಯಿಂದಲೇ ಸ್ಥಳೀಯ ಅಧಿಕಾರಿಗಳು ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಕಾಮಗಾರಿ ಪೂರ್ಣಗೊಂಡಿರುವ ಬಗ್ಗೆ ವಿವರಿಸಿದರು.

ಶಾಲಾ ಸಂಪರ್ಕ ಸೇತು ಯೋಜನೆ ಬಹುತೇಕ ಪೂರ್ಣಗೊಂಡಿದ್ದು, ಉಳಿದ ಕಾಮಗಾರಿಗಳನ್ನು 2-3 ತಿಂಗಳಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರು ಮಾತನಾಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಮಲೆನಾಡ ಶಾಲೆಯೊಂದರಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ಕಾಲುಸಂಕ ದಾಟುವ ಸಂದರ್ಭದಲ್ಲಿ ಅಸುನೀಗಿದ ಸುದ್ದಿಯನ್ನು ಗಮನಿಸಿ, ಮುಖ್ಯಮಂತ್ರಿಗಳು ಜಾರಿಗೆ ತಂದಿರುವ ಶಾಲಾ ಸಂಪರ್ಕ ಸೇತು ಯೋಜನೆ ತ್ವರಿತ ಗತಿಯಲ್ಲಿ ಅನುಷ್ಠಾನಕ್ಕೆ ಬಂದಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...
POLL

[democracy id="1"]