Friday, November 22 , 2019
ರಾಜೀನಾಮೆ ಪ್ರಕ್ರಿಯೆಯನ್ನು ಕಾನೂನು ಪ್ರಕಾರವೇ ಪೂರ್ಣಗೊಳಿಸುತ್ತೇನೆ | ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು(10.07.2019): ಶಾಸಕರು ನೀಡಿರುವ ರಾಜೀನಾಮೆ ಪ್ರಕ್ರಿಯೆಯನ್ನು ಕಾನೂನು ಪ್ರಕಾರವಾಗಿ ಪೂರ್ಣಗೊಳಿಸುತ್ತೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ ನೀಡಿದ್ದು, ಇಂದು ರಾಜೀನಾಮೆ ನೀಡಿರುವ ಶಾಸಕ ಡಾ.ಕೆ.ಸುಧಾಕರ್ ಮತ್ತು ಹೊಸಕೋಟೆ ಶಾಸಕ ಎಂ.ಟಿ.ಬಿ.ನಾಗರಾಜ್ ಅವರನ್ನು 17ರಂದು ಬರಲು ಹೇಳಿದ್ದೇನೆ ಎಂದು ಅವರು ತಿಳಿಸಿದರು.

ನಿನ್ನೆ ಬಿಜೆಪಿ ನಾಯಕರು ನನ್ನ ಭೇಟಿಗೆ ಸಮಯಾವಕಾಶ ಕೋರಿದ್ದರು. ಅವರಿಗೆ ಇಂದು ಮಧ್ಯಾಹ್ನ 3 ಗಂಟೆಗೆ ಸಮಯ ನೀಡಿದ್ದೆ. ಅವರು ನನ್ನನ್ನು ಭೇಟಿಯಾಗಿ ರಾಜೀನಾಮೆ ಇತ್ಯರ್ಥಗೊಳಿಸುವಂತೆ ಮನವಿ ಮಾಡಿದ್ದಾರೆ. ಕಾನೂನು ಪ್ರಕಾರವಾಗಿ ಪರಿಶೀಲಿಸಿ ಕ್ರಮಕೈಗೊಳ್ಳುತ್ತೇನೆ ಎಂದು ಹೇಳಿದ್ದೇನೆ ಎಂದು ಅವರು ಹೇಳಿದರು.

ಸ್ಪೀಕರ್ ರಾಜೀನಾಮೆ ಅಂಗೀಕರಿಸದೇ ತಡ ಮಾಡುತ್ತಿದ್ದಾರೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಿಮಗೆ ಇಷ್ಟ ಬಂದಂತೆ ಮಾತನಾಡಬೇಡಿ, ಶಾಸಕರು ಸಲ್ಲಿರುವ ರಾಜೀನಾಮೆಗಳಲ್ಲಿ ಕೆಲವು ಕ್ರಮಬದ್ಧವಾಗಿಲ್ಲ. ಮತ್ತೊಮ್ಮೆ ಸಲ್ಲಿಸಿ ಎಂದು ನಾನು ಹೇಳಿದ್ದೇನೆ. ರಾಜೀನಾಮೆಯನ್ನು ತಿರಸ್ಕರಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]